Modi | ನಾವು ಮುಸ್ಲಿಂ ಹೆಣ್ಣು ಮಕ್ಕಳ ಪರವಾಗಿದ್ದೇವೆ We stand with every woman says PM Modi In Uttar Pradesh
ಲಕ್ನೋ : ಬಿಜೆಪಿ ಅವರಿಗೆ ಮುಸ್ಲಿಂ ಮಹಿಳೆಯರ ಮೇಲೆ ಗೌರವವಿದೆ. ನಾವು ಮುಸ್ಲಿಂ ಹೆಣ್ಣು ಮಕ್ಕಳ ಪರವಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಜ್ಯಕ್ಕೆ ಕಿಚ್ಚು ಹೊತ್ತಿಸಿರುವ ವಿಜಾಬ್ ಹಾಗೂ ಕೇಸರಿ ಶಾಲು ವಿವಾದ ದೇಶದಾದ್ಯಂತ ಹಬ್ಬಿದೆ. ಇದೀಗ ಈ ಕುರಿತು ಉತ್ತರ ಪ್ರದೇಶದಲ್ಲಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.
ಚುನಾವಣಾ ಪ್ರಚಾರದಲ್ಲಿ ಮಾತನಾಡಿರುವ ಮೋದಿ, ಬಿಜೆಪಿಯವರಿಗೆ ಮುಸ್ಲಿಂ ಹೆಣ್ಣುಮಕ್ಕಳ ಬಗ್ಗೆ ಗೌರವವಿದೆ.
ಆದ್ರೆ ವಿಪಕ್ಷ ನಾಯಕರು ಜನರ ಹಾದಿಯನ್ನು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಅವರಿಗೆ ಮುಸ್ಲಿಂ ಮಹಿಳೆಯರ ಮೇಲೆ ಗೌರವವಿದೆ.
ನಾವು ಮುಸ್ಲಿಂ ಮಹಿಳೆಯರನ್ನು ತ್ರಿವಳಿ ತಲಾಖ್ ಶಿಕ್ಷೆಯಿಂದ ಮುಕ್ತಗೊಳಿಸಿದ್ದೇವೆ. ಬಿಜೆಪಿ ಮೇಲೆ ಮುಸ್ಲಿಂ ಮಹಿಳೆಯರಿಗೆ ವಿಶ್ವಾಸ ಹೆಚ್ಚಾಗುತ್ತಿದೆ.
ಮುಸ್ಲಿಂ ಮಹಿಳೆಯರಿಗೆ ಬಿಜೆಪಿಯವರು ಬೆಂಬಲಿಸುತ್ತಿರುವುದು ವಿಪಕ್ಷಗಳಿಗೆ ಸಹಿಸಲು ಆಗುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.









