ಇನ್ನೆರಡು ವರ್ಷದಲ್ಲಿ ನಾವು ವಾಪಸ್ ಅಧಿಕಾರಕ್ಕೆ ವಾಪಸ್ ಬರುವುದು ಪಕ್ಕಾ – ಸಿದ್ದರಾಮಯ್ಯ..!
ಮೈಸೂರು: ಇನ್ನೆರಡು ವರ್ಷದಲ್ಲಿ ಶೇ. 100 ರಷ್ಟು ನಾವು ವಾಪಸ್ ಅಧಿಕಾರಕ್ಕೆ ಬರೋದು ಖಚಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಮತ್ತೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ. ಅಷ್ಟೇ ಅಲ್ಲದೇ ನಾವು ಅಧಿಕಾರಕ್ಕೆ ಬಂದು ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಘೋಷಿಸಿದ್ದಾರೆ.
ಸಿದ್ದರಾಮಯ್ಯರನ್ನು ಉದ್ಧಾರ ಮಾಡಲು ಹೋಗಿ ನಾನು ಹಾಳಾದೆ : ಹೆಚ್ ವಿಶ್ವನಾಥ್
ಇದೇ ವೇಳೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಯೋಜನೆಗಳನ್ನು ಈಗಿನ ಸರ್ಕಾರ ನಿಲ್ಲಿಸುತ್ತಿದೆ. ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಲಾಗಿದೆ. 7 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಅದನ್ನು ಕಡಿತಗೊಳಿಸಲಾಗಿದೆ. ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಬಂದ ನಂತರ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಅಕ್ಕಿ ಕೊಡ್ತೀನಿ ಅನ್ನೋದೆ ನಿಮ್ಮ ಆಡಳಿತನಾ..?, ಇದನ್ನ ಆಡಳಿತ ಅಂತಾರಾ : ಹೆಚ್ ವಿಶ್ವನಾಥ್ ಕಿಡಿ
ಈ ಸರ್ಕಾರ ಡಕೋಟ ಸರ್ಕಾರ. ಯಡಿಯೂರಪ್ಪ ಡ್ರೈವಿಂಗ್ ಬಾರದ ಮುಖ್ಯಮಂತ್ರಿಯಾಗಿದ್ದು, ಅವರಿಗೆ ದಕೋಟ ಬಸ್ ಕೊಡಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಜೊತೆಗೆ ನಾವು ರಾಮಮಂದಿರ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿಲ್ಲ. ರಾಮಮಂದಿರ, ರಾಮನ ಬಗ್ಗೆ ನಮಗೆ ಅಪಾರ ಗೌರವವಿದೆ. ಒಂದೂವರೆ ಸಾವಿರ ಕೋಟಿ ರೂಪಾಯಿ ಸಂಗ್ರಹಿಸಿದ ಬಗ್ಗೆ ಲೆಕ್ಕ ಕೊಡಲಿ. ಈ ಹಿಂದೆ ಸಂಗ್ರಹಿಸಿದ್ದ ಹಣದ ಬಗ್ಗೆ ಲೆಕ್ಕ ಕೊಡಲಿ ಎಂದು ಹೇಳಿದ್ದಾರೆ.