ನವದೆಹಲಿ:ಛತ್ತೀಸ್‌ಗಢದ ಬಿಜಾಪುರದಲ್ಲಿ ನಕ್ಸಲೀಯರು ಅಟ್ಟಹಾಸ ಮೆರೆದಿದ್ದು, ಜಂಟಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ಡಿಆರ್‌ಜಿ ಯೋಧರ ವಾಹನವನ್ನು ಐಇಡಿ ಮೂಲಕ ಸ್ಫೋಟಿಸಿದ್ದಾರೆ. ಈ ಘಟನೆಯಲ್ಲಿ ಒಂಬತ್ತು ಯೋಧರು ಹುತಾತ್ಮರಾಗಿದ್ದರು. ಈ ಘಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ವ್ಯಕ್ತಪಡಿಸಿದ್ದಾರೆ. ಯೋಧರ ತ್ಯಾಗ ವ್ಯರ್ಥವಾಗಲು ಬಿಡಲ್ಲ ಎಂದು ಗುಡುಗಿದ್ದಾರೆ.
ಅಮಿತ್ ಶಾ ಹೇಳಿಕೆ:
– ಬಿಜಾಪುರದಲ್ಲಿ (ಛತ್ತೀಸ್‌ಗಢ) ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಯೋಧರನ್ನು ಕಳೆದುಕೊಂಡ ಸುದ್ದಿಯಿಂದ ತುಂಬಾ ದುಃಖವಾಗಿದೆ. ವೀರ ಯೋಧರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.
– ಈ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸುವುದು ಅಸಾಧ್ಯ, ಆದರೆ ನಮ್ಮ ಸೈನಿಕರ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ.
– ನಾವು ಮಾರ್ಚ್ 2026ರ ವೇಳೆಗೆ ಭಾರತದ ನೆಲದಿಂದ ನಕ್ಸಲಿಸಂ ನಿರ್ಮೂಲನೆ ಮಾಡುತ್ತೇವೆ ಎಂದು ಟ್ವಿಟರ್‌ನಲ್ಲಿ ಬರೆದಿದ್ದಾರೆ.
ನಕ್ಸಲಿಸಂ ವಿರುದ್ಧದ ಹೋರಾಟ:
– ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಕೂಡ ನಕ್ಸಲೀಯರ ಈ ಹೇಡಿತನದ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಹುತಾತ್ಮ ಯೋಧರ ಕುಟುಂಬಗಳಿಗೆ ನನ್ನ ಸಂತಾಪ. ಹುತಾತ್ಮ ಯೋಧರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಮತ್ತು ಮೃತರ ಕುಟುಂಬಕ್ಕೆ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.
– ಬಸ್ತಾರ್ ನಲ್ಲಿ ನಡೆಯುತ್ತಿರುವ ನಕ್ಸಲ್ ನಿರ್ಮೂಲನಾ ಅಭಿಯಾನದಿಂದ ನಕ್ಸಲೀಯರು ಭಯಗೊಂಡಿದ್ದು, ಹತಾಶೆಯಿಂದ ಇಂತಹ ಹೇಡಿತನದ ಕೃತ್ಯಗಳನ್ನು ಮಾಡುತ್ತಿದ್ದಾರೆ ಎಂದು ಸಿಎಂ ವಿಷ್ಣುದೇವ್ ಸಾಯಿ ಹೇಳಿದ್ದಾರೆ.
– ಸೈನಿಕರ ಬಲಿದಾನ ವ್ಯರ್ಥವಾಗುವುದಿಲ್ಲ, ನಕ್ಸಲ್ ವಾದವನ್ನು ಕೊನೆಗಾಣಿಸಲು ನಮ್ಮ ಹೋರಾಟ ಬಲವಾಗಿ ಮುಂದುವರಿಯಲಿದೆ.








