2023ರ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ : ಹೆಚ್ ಡಿ ಕುಮಾರಸ್ವಾಮಿ
ಮಂಡ್ಯ : ಜೆಡಿಎಸ್ ಪಕ್ಷವನ್ನು ಅಷ್ಟು ಸುಲಭವಾಗಿ ನಾಡಿನಿಂದ ಮರೆ ಮಾಡುವುದಕ್ಕೆ ಆಗಲ್ಲಾ. 2023ರ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.
ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೆಚ್ ವಿಶ್ವನಾಥ್ ಹೇಳಿಕೆಗೆ ಟಾಂಗ್ ನೀಡಿದ ಕುಮಾರಸ್ವಾಮಿ, ನಾವು ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇವೆ. ಜೆಡಿಎಸ್ ಪಕ್ಷ ಹೋರಾಡುತ್ತಿರುವುದು ಅಧಿಕಾರಕ್ಕಾಗಿ ಅಲ್ಲ, ನಿಮ್ಮ ಗೌರವಯುತ ಬದುಕು, ನಾಡಿನ ಸಮಸ್ಯೆ ಬಗೆಹರಿಸಲು ನಾವು ಪ್ರಾಮಾಣಿಕವಾಗಿ ಹೋರಾಡುತ್ತೇವೆ. ಅದಕ್ಕಾಗಿ 2023ರಲ್ಲಿ ಅಧಿಕಾರಕ್ಕೆ ಹೋರಾಟ ಮಾಡ್ತಿದ್ದೇವೆ ಎಂದು ತಿಳಿಸಿದ್ರು.
ಅಲ್ಲದೆ ರಾಷ್ಟ್ರೀಯ ಪಕ್ಷಗಳು ಕಿತ್ತಾಟದಲ್ಲಿ ತೊಡಗಿದ್ದು, ರಾಜ್ಯದ ಸಂಪತ್ತು ಲೂಟಿ ಮಾಡಲು ಹೊರಟಿವೆ ಎಂದು ವಾಗ್ದಾಳಿ ನಡೆಸಿದರು. ಇನ್ನು ಸಿಎಂ ಬದಲಾವಣೆ ಬಗ್ಗೆ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರದಲ್ಲಿನ ಗೊಂದಲ ಬಗೆಹರಿಸಲೆಂದು ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿಲ್ಲ, ಅದು ಅವರಿಗೆ ಬೇಕಾಗಿಯೂ ಇಲ್ಲ. ಇಲ್ಲಿ ಸಮಸ್ಯೆಗಳು ಹೆಚ್ಚಾದಷ್ಟು ಅವರಿಗೆ ಕಾಸು ಜಾಸ್ತಿ ಬರುತ್ತದೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ಹೈಕಮಾಂಡ್ ನಮ್ಮ ಸಂಪತ್ತು ಲೂಟಿ ಮಾಡಲು ಪೆÇ್ರೀತ್ಸಾಹ ನೀಡುತ್ತಿವೆ ಹೊರತು ಇಲ್ಲಿನ ಸಮಸ್ಯೆ ಬಗೆಹರಿಸುವುದಿಲ್ಲ. ರಾಜ್ಯದ ಜನತೆ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದರು.









