ಗೆದ್ದೇ ಗೆಲ್ಲುತ್ತೇವೆ, ಇತಿಹಾಸ ಬರೆಯುತ್ತೇವೆ : ಸಿದ್ದರಾಮಯ್ಯ Siddaramaiah ವಿಶ್ವಾಸ
ಬೆಳಗಾವಿ : ನಮ್ಮ ನಿರೀಕ್ಷೆಗೂ ಮೀರಿ ರೆಸ್ಪಾನ್ಸ್ ಸಿಗುತ್ತಿದೆ. ಬೆಳಗಾವಿಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಇತಿಹಾಸ ಬರೆಯುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆ ಸಿದ್ದರಾಮಯ್ಯ ಮತಬೇಟೆ ಮುಂದುವರಿಸಿದ್ದಾರೆ.
ಪ್ರಚಾರಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಲಕ್ಷ್ಮೀ ಹೆಬ್ಬಾಳಕರ್ ಅವರ ಗ್ರಾಮೀಣ ಮತಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದೇನೆ.
ನಮ್ಮ ನಿರೀಕ್ಷೆಗೂ ಮೀರಿ ಜನ ರೆಸ್ಪಾನ್ಸ್ ಮಾಡ್ತಿದ್ದಾರೆ. ನೂರಕ್ಕೆ ನೂರು ನಾವು ಇಲ್ಲಿ ಗೆಲ್ತಿವಿ ಇತಿಹಾಸ ಬರೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಕಾಂಗ್ರೆಸ್ ಮುಳುಗುವ ಹಡಗು ಎಂಬ ಬಿಎಸ್ ವೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಯಡಿಯೂರಪ್ಪನವರೇ ಸದ್ಯ ಮುಳುಗುತ್ತಿದ್ದಾರೆ.
ಅವರು ಕುಳಿತಿರುವ ಹಡಗೇ ಈಗ ಮುಳುಗುತ್ತಿದ್ದೆ ಎಂದು ಟಾಂಗ್ ನೀಡಿದರು.










