ಭಾರತ-ಪಾಕ್ ಗಡಿಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆ – Saaksha Tv
ಪಂಜಾಬ್: ಭಾರತ-ಪಾಕಿಸ್ತಾನ ಗಡಿಯಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ.
ಪಂಜಾಬ್ ನ ಗಡಿ ಭಾಗ ಫಿರೋಜ್ಪುರದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಇವುಗಳನ್ನು ಪಾಕಿಸ್ತಾನದಿಂದ ತಂದು ಸುಸಾತ್ನ ಹೊರವಲಯದಲ್ಲಿ ಸಂಗ್ರಹಿಸಲಾಗಿತ್ತು. ಇವುಗಳನ್ನು ಬಿಎಸ್ಎಫ್ ಸಿಬ್ಬಂದಿ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ.
ಎಐಎಸ್ಟಿಎಫ್ ಮತ್ತು ಬಿಎಸ್ಎಫ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಈ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಪತ್ತೆ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ 47 ರೈಫಲ್ಗಳು ಮತ್ತು ಎ-10 ಮ್ಯಾಗಜೀನ್ಗಳು, 8 ರೈಫಲ್ಗಳು, 6 ಮ್ಯಾಗಜೀನ್ಗಳು, 5 ಪಿಸ್ತೂಲ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.








