ಹಿಜಾಬ್ ಧರಿಸಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ಬರಲು ಬಿಡುವುದಿಲ್ಲ : ಅಶ್ವತ್ ನಾರಾಯಣ Saaksha Tv
ಚಾಮರಾಜನಗರ: ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಇಲ್ಲ. ಆದರೆ ಹಿಜಾಬ್ ಧರಿಸಿ ಶಾಲೆಗೆ ಬರಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹೇಳಿದರು.
ಹಿಜಾಬ್ – ಕೇಸರಿ ಶಾಲು ಧಾರಣೆ ಕುರಿತು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಆದರೆ ಈ ಆದೇಶವನ್ನು ಉಲ್ಲಂಘಸಿ ವಿದ್ಯಾರ್ಥನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಹೋಗುತ್ತಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಕಾನೂನು ಗೌರವಿಸುವುದನ್ನು ಎಲ್ಲರೂ ಕಲಿತುಕೊಳ್ಳಬೇಕು. ನ್ಯಾಯಾಲಯದ ಸೂಚನೆಯ ನಂತರವು ಹಿಜಾಬ್ ಧರಿಸಿ ಬರುವುದು ತಪ್ಪಾಗುತ್ತದೆ ಎಂದು ಹೇಳಿದ್ದಾರೆ.
ಅಲ್ಲದೇ ಯಾವುದೇ ಕಾರಣಕ್ಕೂ ಹಿಜಾಬ್ ಧರಿಸಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ಬರಲು ಬಿಡುವುದಿಲ್ಲ. ಶಾಲಾ ಕಾಲೇಜುಗಳಿಗೆ ಹೊರಗಿನ ಶಕ್ತಿಗಳು ಪ್ರವೇಶ ಮಾಡಬಾರದು. ಹೊರಗಿನವರು ಬಾರದಂತೆ ನೋಡಿಕೊಳ್ಳುವುದು ಪ್ರಾಂಶುಪಾಲರು, ಅಧ್ಯಾಪಕರ ಜವಾಬ್ದಾರಿ. ಯಾರೂ ಯಾರನ್ನು ಟೀಕೆ ಮಾಡುವುದು, ಆರೋಪ ಮಾಡುವುದು, ಗೊಂದಲ ನಿರ್ಮಾಣ ಮಾಡುವುದು ಬೇಡ ಎಂದು ವಿನಂತಿಸಿದರು.
ಅಲ್ಲದೇ ಶನಿವಾರದಿಂದ (ಫೆ 19) ಪದವಿ ಕಾಲೇಜುಗಳು ಮತ್ತೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದರು.