ಹಿಜಾಬ್ ಇಸ್ಲಾಂ ನ ಅತ್ಯಗತ್ಯ ಭಾಗವಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು..
ಬೆಂಗಳೂರು: ವಿಶ್ವ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದ್ದ ಹಿಜಾಬ್ ವಿವಾದಕ್ಕೆ ಕರ್ನಾಟಕ ಹೈಕೋರ್ಟ್ ಫುಲ್ ಸ್ಟಾಪ್ ಇಟ್ಟಿದೆ. ಮಹತ್ವದ ತೀರ್ಪು ನೀಡಿದೆ ಹೈಕೋರ್ಟ್ ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ನಿಗದಿಪಡಿಸುವುದು ಸೂಕ್ತವಾದ ನಿರ್ಬಂಧನೆ. ಸರ್ಕಾರದ ಆದೇಶ ಕಾನೂನುಬದ್ದವಾಗಿದೆ ಎಂದು ತಿಳಿಸಿದೆ.
ಉಡುಪಿಯ ಸರ್ಕಾರಿ ಪಿ ಯು ಕಾಲೇಜಿನ ವಿದ್ಯಾರ್ಥಿನೀಯರಿಂದ ಶುರುವಾಗಿದ್ದ ಹಿಜಾಬ್ ಗಲಾಟೆ ದೇಶಾದ್ಯಾಂತ ವ್ಯಾಪಸಿ ವಿಶ್ವ ಮಟ್ಟದಲ್ಲಿ ಸದ್ದು ಮಾಡಿತ್ತು. ಮುಸ್ಲಿಂ ಸಮುದಾಯದ ಕೆಲ ವಿದ್ಯಾರ್ಥಿನಿಯರು ಹಿಜಾಬ್ ನಮ್ಮ ಹಕ್ಕು, ನಾವು ಧರಿಸಿಯೇ ಶಾಲೆ- ಕಾಲೇಜಿಗೆ ಬರುತ್ತೇವೆ ಎಂದು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಅವರು ಹಿಜಾಬ್ ಧರಿಸುವವರೆಗೆ ನಾವು ಕೇಸರಿ ಶಾಲು ಧರಿಸುತ್ತೇವೆ ಎಂದು ಹಲವು ಹಿಂದೂ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು.
ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರವರ ಪೂರ್ಣ ಪೀಠ 11 ದಿನಗಳ ಕಾಲ ವಿಚಾರಣೆಯನ್ನ ನಡೆಸಿ ತೀರ್ಪು ನೀಡಿದೆ. ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಉಡುಪಿ ಕಾಲೇಜಿಗೆ ನಿರ್ದೇಶನ ಹೇರುವ ಅಗತ್ಯವಿಲ್ಲ ಅಂತ ಕೋರ್ಟ್ ತಿಳಿಸಿದೆ.
‘Wearing Hijab not essential religious practice’: HC dismisses petitions of Udupi college girls