ವೀಕೆಂಡ್ ಕರ್ಫ್ಯೂ ಏನ್ ಇರುತ್ತೆ ಏನ್ ಇರಲ್ಲ.. ಟಾಪ್ ಫೈವ್ ಸ್ಟೋರಿ
01. ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಮತ್ತೆ ಶುರುವಾಗಿದೆ. ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಕೊರೊನಾ ಕೇಸ್ ಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ ಫೆಬ್ರವರಿ ವೇಳೆಗೆ ರಾಜ್ಯದಲ್ಲಿ ದಿನ ಒಂದಕ್ಕೆ ಎಂಬತ್ತು ಸಾವಿರದಿಂದ ಒಂದು ಲಕ್ಷ ಕೊರೊನಾ ಕೇಸ್ ಗಳು ಪತ್ತೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ವಿಜ್ಞಾನ ಸಂಸ್ಥೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ.
02. ವೀಕೆಂಡ್ ಕರ್ಫ್ಯೂ ವೇಳೆ ಶನಿವಾರ ಮತ್ತು ಭಾನುವಾರ ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ರಸ್ತೆಗಳಿಯಲ್ಲ. ಜೊತೆಗೆ ರಾತ್ರಿ ನಿಷೇಧಾಜ್ಞೆ ವೇಳೆಯೂ ಬಸ್ ಓಡಾಡುವುದಿಲ್ಲ. ಅಗತ್ಯ ಸೇವೆಯಡಿ ಮಾತ್ರ ಬಸ್ ಓಡಾಟ ನಡೆಸಲಿದೆ. ಆದ್ರೆ ಸಾರ್ವಜನಿಕ ಸಂಚಾರ ಸೇವೆ ಇರುವುದಿಲ್ಲ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ.
03. ವೀಕೆಂಡ್ ಕರ್ಫ್ಯೂ ವೇಳೆ ಸಾರಿಗೆಯನ್ನು ಅಗತ್ಯ ಸೇವೆ ಎಂದು ಪರಿಗಣಿಸಲಾಗಿದ್ದು, ವಾರಾಂತ್ಯದ ಕರ್ಫ್ಯೂ ವೇಳೆ ಮೆಟ್ರೋ ಸಂಚಾರಕ್ಕೆ ಯಾವುದೇ ಅಡ್ಡಿ ಇರುವುದಿಲ್ಲ. ಶನಿವಾರ – ಭಾನುವಾರ ಎಂದಿನಂತೆ ಹಸಿರು ಮತ್ತು ನೇರಳೆ ಎರಡು ಮಾರ್ಗದಲ್ಲೂ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ. ಆದ್ರೆ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಅಂದರೇ ಸದ್ಯ ಮೆಟ್ರೋದಲ್ಲಿ ನಿತ್ಯ 1,800 ರಿಂದ 1,900 ಪ್ರಯಾಣಿಕರು ಸಂಚಾರ ಮಾಡುತ್ತಿದ್ದು, ವೀಕೆಂಡ್ ಕರ್ಫ್ಯೂ ವೇಳೆ ಕೇವಲ 800 ರಿಂದ 900 ಪ್ರಯಾಣಿಕರ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
04. ಇದು ಕೋವಿಡ್ ಕರ್ಫ್ಯೂ ಅಲ್ಲ, ಬಿಜೆಪಿ ಕರ್ಫ್ಯೂ. ಯಾವ ಟಫ್ ರೂಲ್ಸ್ ಅಲ್ಲಾ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾವು ರ‍್ಯಾಲಿ ಮಾಡಲ್ಲ ಸಮಾವೇಶ ಮಾಡಲ್ಲ. ನೀರಿಗಾಗಿ ನಾವು ನಡೆಯುತ್ತೇವೆ. ತಾಯಿ ಕಾವೇರಿ ನೀರು ಕುಡಿಯಬೇಕು ಅಂತ ನಡೆಯುತ್ತಿದ್ದೇವೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಾದಯಾತ್ರೆ ನಿಲ್ಲುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
05. ಕೊರೊನಾ ಸೋಂಕು ತಡೆಗೆ ರಾಜ್ಯ ಸರ್ಕಾರ ರಾಜ್ಯದಾದ್ಯಂತ ಹಾಫ್ ಲಾಕ್ ಡೌನ್ ಜಾರಿ ಮಾಡಿದೆ. ಆದ್ರೆ ಇದಕ್ಕೆ ಆಡಳಿತ ಪಕ್ಷದಲ್ಲಿಯೇ ಅಪಸ್ವರ ಉಂಟಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಲಾಕ್ ಡೌನ್ ಬಗ್ಗೆ ಮಾತನಾಡಿದ್ದು, ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಿರುವ ಬೆಂಗಳೂರಿನ ಕಠಿಣ ನಿಯಮಗಳು ಕೋವಿಡ್ ಕಡಿಮೆ ಇರುವ ಇತರೆ ಜಿಲ್ಲೆಗಳಿಗೆ ಬೇಡ ಎಂದಿದ್ದಾರೆ.