ಕೊರೊನಾ ಹೆಚ್ಚಳ : ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಿತ್ತಿರುವ ಹಾಗೂ ನೆರೆಯ ರಾಜ್ಯಗಳಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳದ ಗಡಿಯಲ್ಲಿರುವ 8 ಜಿಲ್ಲೆಗಳಲ್ಲಿ ವೀಕೆಂಡ್ ಕಫ್ರ್ಯೂ ಜಾರಿಯಾಗಲಿದೆ.
ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಜ್ಞರ ಜೊತೆ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಬೆಳಗಾವಿ, ಬೀದರ್, ಕಲುಬುರಗಿ, ವಿಜಯಪುರದಲ್ಲಿ ಶನಿವಾರ, ಭಾನುವಾರ ಲಾಕ್ ಡೌನ್ ಜಾರಿಯಲ್ಲಿರಲಿದೆ. ರಾಜ್ಯಾದ್ಯಂತ ನೈಟ್ ಕಫ್ರ್ಯೂ ಅವಧಿಯನ್ನು ಹೆಚ್ಚಿಸಲಾಗಿದ್ದು, ರಾತ್ರಿ 10ರ ಬದಲಾಗಿ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಇರಲಿದೆ ಎಂದು ವಿವರಿಸಿದ್ದಾರೆ.
ಇನ್ನು ಶಾಲಾ ಕಾಲೇಜು ಆರಂಭದ ಬಗ್ಗೆ ಮಾತನಾಡಿ, ಇಂದಿನ ಸಭೆಯಲ್ಲಿ ಶಾಲಾ, ಕಾಲೇಜು ಪ್ರಾರಂಭದ ಬಗ್ಗೆ ಚರ್ಚೆ ನಡೆದಿದ್ದು, ಎರಡು ಹಂತದಲ್ಲಿ ಶಾಲಾ, ಕಾಲೇಜುಗಳು ಪ್ರಾರಂಭವಾಗಲಿದೆ. ಮೊದಲ ಹಂತ 9ರಿಂದ 12ನೇ ತರಗತಿವರೆಗೆ ಆಗಸ್ಟ್ 23 ರಿಂದ ಆರಂಭವಾಗಲಿದೆ. ಆಗಸ್ಟ್ ಕೊನೆಯ ವಾರದಲ್ಲಿ ಪರಿಸ್ಥಿತಿ ನೋಡಿಕೊಂಡು 1 ರಿಂದ 8 ತರಗತಿವರೆಗಿನ ಶಾಲೆಗಳನ್ನು ಓಪನ್ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.








