“ಕೊರೊನಾ ನಿಯಂತ್ರಣಕ್ಕೆ ವೀಕೆಂಡ್ ಲಾಕ್ ಡೌನ್ ಸಾಲದು” : ಸಿದ್ದರಾಮಯ್ಯ
ಬೆಂಗಳೂರು : ಕೊರೊನಾ ಮೂರನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ವೀಕೆಂಡ್ ಲಾಕ್ ಡೌನ್ ಸಾಲುವುದಿಲ್ಲ. ಬದಲಾಗಿ ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು.
ಕನಿಷ್ಠ ಒಂದು ವರ್ಷಗಳ ಕಾಲ ಹಬ್ಬ, ಜಾತ್ರೆಗಳಿಗೆ ನಿಷೇಧ ಹೇರಬೇಕು. 3ನೇ ಅಲೆ ಬರುವ ಆತಂಕವೂ ಇದೆ. ಹೀಗಾಗಿ ಕಟ್ಟೆಚ್ಚರ ಅಗತ್ಯವಿದ್ದು, ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಮುಖ್ಯಮಂತ್ರಿಗಳು ಸಭೆಗಳ ಮೇಲೆ ಸಭೆ ನಡೆಸಿದರೆ ಸಾಲದು. ಯಡಿಯೂರಪ್ಪ ಕೂಡ ಸಭೆಗಳ ಮೇಲೆ ಸಭೆ ಮಾಡುತ್ತಿದ್ದರು.
ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಸಚಿವರು ಕೊರೊನಾ ಸಂದರ್ಭದಲ್ಲಿ ಸಂಭ್ರಮಾಚರಣೆಯಲ್ಲಿ ಭಾಗವಹಿಸಬಾರದು.
ಪೂಜೆ ಹಾಗೂ ಇತರೆ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸದೆ ಬೇಜಾವಬ್ದಾರಿಯಿಂದ ವರ್ತಿಸಲಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಎಲ್ಲ ಸಂದರ್ಭಗಳಲ್ಲೂ ಎಚ್ಚರಿಕೆಯಿಂದ ಇರಬೇಕು ಎಂದು ವಿಪಕ್ಷ ನಾಯಕರು ಸಲಹೆಗಳನ್ನು ನೀಡಿದರು.









