ಸುಸೂತ್ರವಾಗಿ ಮುಗಿದ SSLC ಪರೀಕ್ಷೆ – ಮೇ ಎರಡನೇ ವಾರ ಫಲಿತಾಂಶ

1 min read

ಸುಸೂತ್ರವಾಗಿ ಮುಗಿದ SSLC ಪರೀಕ್ಷೆ – ಮೇ ಎರಡನೇ ವಾರ ಫಲಿತಾಂಶ

ಈ ಬಾರಿಯ ಎಸ್ ಎಸ್ ಎಲ್ ಎಲ್ ಸಿ ಪರೀಕ್ಷೆ ಸುಸೂತ್ರವಾಗಿ ಮುಕ್ತಾಯಗೊಂಡಿದ್ದು, ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಶೈಕ್ಷಣಿಕ ಪ್ರಗತಿ ಪರಿಶೀಲನೆಗಾಗಿ ವಿಜಯಪುರಕ್ಕೆ ಆಗಮಿಸಿದ್ದ ಸಚಿವರು, ಆಲಮಟ್ಟಿಯಲ್ಲಿ ಸೋಮವಾರ (ಏ.11) ಸುದ್ದಿಗಾರರ ಜೊತೆ ಮಾತನಾಡಿದರು. ನಾಳೆಯಿಂದ ಕೀ ಉತ್ತರಗಳು, ಆಕ್ಷೇಪಣೆ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಏಪ್ರಿಲ್ ಕೊನೆಯ ವಾರದಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪ್ರಾರಂಭವಾಗಲಿದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಜೂನ್ ನಾಲ್ಕನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.

ಮಾರ್ಚ್ 28 ರಿಂದ ಆರಂಭವಾದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೊದಲ ಬಾರಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪ್ರಮಾಣ ಶೇ. 98ಕ್ಕಿಂತ ಹೆಚ್ಚಾಗಿತ್ತು. ಸಮವಸ್ತ್ರ ವಿವಾದದ ನಡುವೆಯೂ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಅನಾರೋಗ್ಯ ಲಕ್ಷಣಗಳು ಕಂಡು ಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಪರೀಕ್ಷೆಯ ಅವಧಿಯಲ್ಲಿ ಯಾವೊಬ್ಬ ವಿದ್ಯಾರ್ಥಿಗೂ ಕೋವಿಡ್ ಪಾಸಿಟಿವ್ ಬಂದಿಲ್ಲ’ ಎಂದು ಸಚಿವ ನಾಗೇಶ್ ಮಾಹಿತಿ ನೀಡಿದರು.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd