West Bengal | ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ 8 ಮಂದಿ ಸಾವು
ಕೋಲ್ಕತ್ತಾ : ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ಪ್ರವಾಹ ಉಂಟಾಗಿ ಎಂಟು ಮಂದಿ ಮೃತಪಟ್ಟು, ಹಲವರು ನಾಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ಜಲ್ ಪೈಗುರಿಯಲ್ಲಿ ನಡೆದಿದೆ.
ಜಲ್ ಪೈಗುರಿಯ ನಿಯೋರಾ ನದಿಯಲ್ಲಿ ದುರ್ಗಾದೇವಿ ಮೂರ್ತಿ ವಿಸರ್ಜನೆ ಮಾಡಲು ಸಾವಿರಾರು ಭಕ್ತರು ಮುಂದಾಗಿದ್ದರು.
ಈ ವೇಳೆ ಏಕಾಏಕಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಎಂಟು ಮಂದಿ ಮರಣ ಹೊಂದಿದ್ದಾರೆ.

ಹಲವರು ನಾಪತ್ತೆಯಾಗಿದ್ದಾರೆ. ಸದ್ಯ ನಾಪತ್ತೆಯಾದವರಿಗಾಗಿ ಶೋಧ ಕಾರ್ಯಚರಣೆ ಮುಂದುವರೆದಿದೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಘಟನೆಯಲ್ಲಿ 13 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿದೆ.
ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ.
ಈ ದುರಂತ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.