ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ಮೇಲೆ ಬಾಂಬ್ ದಾಳಿ: ಓರ್ವ ಸಾವು
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಾಂಬ್ ದಾಳಿ ನಡೆದಿದ್ದು, ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದಾರೆ. ಮೂವರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ಬಾಂಬ್ ದಾಳಿಯಲ್ಲಿ ಮೃತಪಟ್ಟವರನ್ನು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತ ಸೌವಿಕ್ ದೊಲೈ ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂವರನ್ನು ಮಿಡ್ನಾಪುರದ ಮೆಡಿಕಲ್ ಕಾಲೇಜಿನಲ್ಲಿ ದಾಖಲಿಸಲಾಗಿದೆ.
ರಸ್ತೆ ಬದಿಯಲ್ಲಿ ಕೂತಿದ್ದ ನಾಲ್ವರು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತರು ಬಾಂಬ್ ಎಸೆದಿದ್ದಾರೆ ಎನ್ನಲಾಗಿದೆ. ಅಲ್ಲಿಂದ ಓಡಲು ನೋಡಿದ ದೊಲೈ ಮೇಲೆ ಗುಂಡು ಹಾರಿಸಿದ್ದಾರೆ. ದೊಲೈ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಬಿಜೆಪಿಯವರೇ ಕಾರಣ ಎಂದು ಸ್ಥಳೀಯ ಟಿಎಂಸಿ ನಾಯಕರು ಆರೋಪ ಮಾಡಿದ್ದಾರೆ. ಆದ್ರೆ , ತೃಣಮೂಲ ಕಾಂಗ್ರೆಸ್ ಒಳಜಗಳದಿಂದ ಈ ಘಟನೆ ನಡೆದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಮಿತ್ ದಾಸ್ ಆರೋಪಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲೇ ನಡೆದಿರುವ ಈ ಘಟನೆ ಆಘಾತಕಾರಿಯಾಗಿದೆ.
ಉತ್ತರಪ್ರದೇಶ | ಕಾರಿಗೆ ಆಯಿಲ್ ಟ್ಯಾಂಕರ್ ಡಿಕ್ಕಿ : 7 ಮಂದಿ ಸಾವು