West Bengal – ಸಚಿವರ ಆಪ್ತ ಸಹಾಯಕಿ ಮನೆಯಲ್ಲಿ ಕೋಟಿ ಕೋಟಿ ಪತ್ತೆ…
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸಚಿವ ಸಂಪುಟದ ಕೈಗಾರಿಕಾ ಸಚಿವ ಪಾರ್ಥ ಚಟರ್ಜಿ ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ದಾಳಿ ನಡೆಸಿದೆ. ದಾಳಿಯಲ್ಲಿ ಅರ್ಪಿತಾ ಮುಖರ್ಜಿ ಅವರ ಮನೆಯಿಂದ 20 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಈ ಹಣವನ್ನು ಶಾಲಾ ಸೇವಾ ಆಯೋಗದ (ಎಸ್ಎಸ್ಸಿ) ಹಗರಣದಲ್ಲಿ ಗಳಿಸಲಾಗಿದೆ ಎಂದು ತನಿಖಾ ಸಂಸ್ಥೆ ಶಂಕಿಸಿದೆ.

ಪಾರ್ಥ ಚಟರ್ಜಿ, ಶಿಕ್ಷಣ ಖಾತೆ ರಾಜ್ಯ ಸಚಿವ ಪರೇಶ್ ಸಿ ಅಧಿಕಾರಿ, ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರ ಮನೆ ಸೇರಿದಂತೆ 13 ಸ್ಥಳಗಳ ಮೇಲೆ ಇಡಿ ತಂಡ ದಾಳಿ ನಡೆಸಿದೆ. ಆದರೆ, ಅವರ ಬಳಿ ಯಾವುದೇ ನಗದು ಪತ್ತೆಯಾಗಿಲ್ಲ. ಇ ಡಿ ಪ್ರಸ್ತುತ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ ಮತ್ತು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯಲ್ಲಿ ನೇಮಕಾತಿ ಹಗರಣದ ತನಿಖೆ ನಡೆಸುತ್ತಿದೆ. ಈ ಹಗರಣ ನಡೆದಾಗ ಪಾರ್ಥ ಚಟರ್ಜಿ ಶಿಕ್ಷಣ ಸಚಿವರಾಗಿದ್ದರು.
ಅರ್ಪಿತಾ ಮನೆಯಲ್ಲಿ 20 ಮೊಬೈಲ್ ಫೋನ್ಗಳು
ಚಟರ್ಜಿ ಅವರ ಆಪ್ತ ಸಹಾಯಕಿ ಅರ್ಪಿತಾ ಅವರ ಮನೆಯಿಂದ 20 ಕ್ಕೂ ಹೆಚ್ಚು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಪಿತಾ ಏಕೆ ಇಷ್ಟೊಂದು ಫೋನ್ ಬಳಸುತ್ತಿದ್ದಳು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 500 ಮತ್ತು 2000 ನೋಟುಗಳನ್ನು ಎಣಿಸಲು ಇಡಿ ಅಧಿಕಾರಿಗಳು ಎಣಿಕೆ ಯಂತ್ರಗಳ ಸಹಾಯ ಪಡೆದಿದ್ದಾರೆ.








