ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಶಿಖರ್ ಧವನ್ ಗೆ ನಾಯಕತ್ವ….
ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ತಂಡವನ್ನ ಬಿಸಿಸಿಐ ಪ್ರಕಟಿಸಿದೆ. ಏಕದಿನ ತಂಡದ ನಾಯಕತ್ವವನ್ನು ಶಿಖರ್ ಧವನ್‌ಗೆ ಹಸ್ತಾಂತರಿಸಲಾಗಿದೆ.
ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್ ಮತ್ತು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ.
ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡ ಇಂತಿದೆ-
ಶಿಖರ್ ಧವನ್ (ನಾಯಕ), ರವೀಂದ್ರ ಜಡೇಜಾ (ಉಪನಾಯಕ), ರಿತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆ), ಸಂಜು ಸ್ಯಾಮ್ಸನ್ (ವಿಕೆ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.
ಇಂಗ್ಲೆಂಡ್ ವಿರುದ್ಧದ 3 ಏಕದಿನ ಹಾಗೂ 3 ಟಿ20 ಪಂದ್ಯಗಳ ಸರಣಿ ಬಳಿಕ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತೆರಳಲಿದೆ. ಜುಲೈ 22 ರಂದು ಪ್ರವಾಸ ಆರಂಭವಾಗಲಿದ್ದು, 3 ಏಕದಿನ ಹಾಗೂ 5 ಟಿ20 ಪಂದ್ಯಗಳ ಸರಣಿಯನ್ನು ವಿಂಡೀಸ್ ವಿರುದ್ಧ ಟೀಂ ಇಂಡಿಯಾ ಆಡಬೇಕಿದೆ. ಟಿ20 ಪಂದ್ಯಗಳಿಗೆ ತಂಡವನ್ನು ಇನ್ನೂ ಆಯ್ಕೆ ಮಾಡಿಲ್ಲ. West Indies tour – Team India announced for West Indies tour: Shikhar Dhawan captained….
ಅಮೆರಿಕದಲ್ಲಿಯೂ ನಡೆಯಲಿವೆ ಎರಡು ಟಿ20 ಪಂದ್ಯಗಳು
ವೆಸ್ಟ್ ಇಂಡೀಸ್ ಸರಣಿಯ ಎರಡು ಟಿ20 ಪಂದ್ಯಗಳು ಅಮೆರಿಕದ ಫ್ಲೋರಿಡಾದಲ್ಲಿ ನಡೆಯಲಿದೆ. ಈ ಎರಡೂ ಪಂದ್ಯಗಳು ಆಗಸ್ಟ್ 6 ಮತ್ತು 7 ರಂದು ನಡೆಯಲಿದೆ. ಗುರುವಾರ ಬಿಡುಗಡೆಯಾದ ವೇಳಾಪಟ್ಟಿಯ ಪ್ರಕಾರ ಭಾರತ ತಂಡ ಜುಲೈ 22 ರಿಂದ ಆಗಸ್ಟ್ 7 ರವರೆಗೆ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಪ್ರವಾಸ ಕೈಗೊಳ್ಳಲಿದೆ. ಮೊದಲ ಮೂರು ಏಕದಿನ ಪಂದ್ಯಗಳು ಜುಲೈ 22 ರಿಂದ 27 ರವರೆಗೆ ಅಲ್ಲಿ ನಡೆಯಲಿವೆ. ನಂತರ ಜುಲೈ 29 ರಿಂದ ಆಗಸ್ಟ್ 7 ರ ನಡುವೆ ಐದು ಟಿ20 ಪಂದ್ಯಗಳು ನಡೆಯಲಿವೆ.