ಚಂದನ್ ಶೆಟ್ಟಿ (Rapper Chandan Shetty) ಹಾಗೂ ನಿವೇದಿತಾ ಗೌಡ ಡಿವೋರ್ಸ್ (Chandan- Niveditha Divorce) ಪಡೆದಿರುವ ವಿಚಾರ ಅಭಿಮಾನಿಗಳಿಗೆ ಶಾಕ್ ನೀಡಿದೆ. ಈ ಮಧ್ಯೆ ಡಿವೋರ್ಸ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚಂದನ್ ಬರೆದುಕೊಂಡಿದ್ದಾರೆ.
ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಇಡೀ ರಾಜ್ಯದ ಜನರೇ ಆಶ್ಚರ್ಯ ವ್ಯಕ್ತಪಡಿಸಿದ್ದರು. ಇದು ಸಿನಿಮಾ ಪ್ರಮೋಷನ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಈಗ ಚಂದನ್ ಶೆಟ್ಟಿ ಅಧಿಕೃತವಾಗಿ ಹೇಳಿದ್ದಾರೆ. ಇಬ್ಬರೂ ತಮ್ಮ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಡಿವೋರ್ಸ್ ವಿಚಾರವನ್ನು ಅಧಿಕೃತವಾಗಿ ಬಹಿರಂಗಪಡಿಸಿದ್ದಾರೆ. ಕಾನೂನು ಬದ್ಧವಾಗಿ ಪರಸ್ಪರ ಒಪ್ಪಂದದಿಂದ ಸಂಬಂಧ ಕೊನೆಗೊಳಿಸುವುದಾಗಿ ಹೇಳಿಕೊಂಡಿದ್ದಾರೆ.
ನಾನು ಮತ್ತು ನಿವೇದಿತಾ ಮದುವೆಯಾಗಿ ನಾಲ್ಕು ವರ್ಷಗಳ ನಂತರ ಕಾನೂನುಬದ್ಧವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಸ್ವಂತ ಸಂತೋಷ ಮತ್ತು ಬೆಳವಣಿಗೆಯ ಮೇಲೆ ಕೇಂದ್ರೀಕರಿಸುವುದು ಮುಖ್ಯ ಎಂದು ಅರ್ಥಮಾಡಿಕೊಳ್ಳುವ ಮೂಲಕ ನಾವು ನಮ್ಮ ಮದುವೆಯನ್ನು ಉತ್ತಮ ರೀತಿಯಲ್ಲಿ ಕೊನೆಗೊಳಿಸುತ್ತಿದ್ದೇವೆ. ಈ ಕಷ್ಟದ ಸಮಯದಲ್ಲಿ ನಾವು ಮಾಧ್ಯಮಗಳು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ಬೆಂಬಲವನ್ನು ಕೇಳುತ್ತೇವೆ. ನಾವು ನಮ್ಮ ದಾರಿಯಲ್ಲಿ ಹೋಗುತ್ತಿದ್ದರೂ ಸಹ, ನಾವು ಇನ್ನೂ ಪರಸ್ಪರ ಬಲವಾದ ಸ್ನೇಹ ಮತ್ತು ಗೌರವವನ್ನು ಹೊಂದಿದ್ದೇವೆ. ಈ ಸವಾಲಿನ ಅವಧಿಯಲ್ಲಿ ನಿಮ್ಮ ಬೆಂಬಲ ನಮ್ಮಿಬ್ಬರ ಮೇಲಿರಲಿ ಎಂದು ಚಂದನ್ ಬರೆದುಕೊಂಡಿದ್ದಾರೆ.
ನಿವೇದಿತಾ ಕೂಡ ಇಬ್ಬರ ಡಿವೋರ್ಸ್ ವಿಚಾರ ಅಭಿಮಾನಿಗಳಿಗಂತೂ ಶಾಕ್ ತಂದಿದ್ದು, ಈ ಕುರಿತು ಭಾರೀ ಚರ್ಚೆಯಾಗುತ್ತಿದೆ.