ಏನೇ ಆದರೂ ನನ್ನ ಜೀವ ಇರುವವರೆಗೂ ದರ್ಶನ್ ನನ್ನ ಮಗ ಎಂದು ಮಾಜಿ ಸಂಸದೆ ಸುಮಲತಾ ಅವರು ಹೇಳಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಯಾವಾಗಲೂ ನನ್ನ ಮಗ. ನಾನು ದರ್ಶನ್ ಪತ್ನಿ ವಿಜಯಲಕ್ಷ್ಮೀಯೊಂದಿಗೆ ಸಂಪರ್ಕದಲ್ಲಿದ್ದೇನೆ. ಸದ್ಯಕ್ಕೆ ದರ್ಶನ್ ಗೆ ಆರೋಗ್ಯ ಸರಿಯಿಲ್ಲ. ಆತ ಬೇಗ ಗುಣಮುಖವಾಗಲಿ. ಅಲ್ಲದೇ, ಕಾನೂನು ಸಮರದಲ್ಲಿ ಗೆದ್ದು ಬರಲಿ ಎಂದು ಹೇಳಿದ್ದಾರೆ.
ದರ್ಶನ್ ಬೆನ್ನು ನೋವಿನ ಚಿಕಿತ್ಸೆ ಪಡೆಯುತ್ತಿದ್ದು, ಬೆನ್ನು ನೋವು ತುಂಬಾ ಇದೆ. ಆದರೆ ಸರ್ಜರಿ ಅವರಿಗೆ ಇಷ್ಟ ಇಲ್ಲ ಎನ್ನಲಾಗುತ್ತಿದೆ. ಯಾಕೆಂದರೆ, ಸರ್ಜರಿ ಮಾಡಿದರೆ ರಿಕವರಿ ಸಮಯ ತುಂಬ ಇರುತ್ತದೆ. ಶೂಟಿಂಗ್ ಅರ್ಧಕ್ಕೆ ನಿಂತಿದೆ. ಇದು ಸಿನಿಮಾ ಇಂಡಸ್ಟ್ರಿ ನಷ್ಟ ಎದುರಿಸುತ್ತಿರುವ ಸಂದರ್ಭವಾಗಿದೆ. ಈಗ ದರ್ಶನ್ ಫೋನ್ ಬಳಕೆ ಮಾಡುತ್ತಿಲ್ಲ. ಆದರೆ, ಆದಷ್ಟು ಬೇಗ ದರ್ಶನ್ ಗುಣಮುಖವಾಗಲಿ ಎಂದು ಹೇಳಿದ್ದಾರೆ.