ತುಮಕೂರು :ಬೆಂಗಳೂರು ಡಿಜೆ ಹಳ್ಳಿ ಕೆಜಿ ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಸಾರ್ವಜನಿಕ ಆಸ್ತಿಗೆ ಸಾಕಷ್ಟು ಹಾನಿ ಆಗಿದ್ದು, ಗಲಭೆಕೋರರಿಂದಲೇ ಆಸ್ತಿ ನಷ್ಟ ವಸೂಲಿ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ವಿಚಾರದ ಬಗ್ಗೆ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಗಲಭೆಕೋರರಿಂದಲೇ ಆಸ್ತಿ ನಷ್ಟ ವಸೂಲಿ ಮಾಡಬೇಕು ಎಂಬ ಕಾನೂನನ್ನು ಕೇಂದ್ರ ಸರ್ಕಾರ ತಂದಿದೆ. ಆದರೆ ಕರ್ನಾಟಕದಲ್ಲಿ ಅದು ಜಾರಿ ಆಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಸ್ತಿ ಮುಟ್ಟುಗೋಲು ಆಗುವಂತಹ ಪ್ರಕರಣಗಳು ಇನ್ನೂ ಆಗಿರಲಿಲ್ಲ. ಹೀಗಾಗಿ ಆ ಕಾನೂನು ರಾಜ್ಯದಲ್ಲಿ ಇನ್ನೂ ಜಾರಿ ಆಗಿರಲಿಲ್ಲ. ಡಿಜೆ ಹಳ್ಳಿ ಪ್ರಕರಣದಲ್ಲಿ ಗಲಭೆಕೋರರಿಂದ ಆಸ್ತಿ ನಷ್ಟ ವಸೂಲಿ ಮಾಡುವ ಬಗ್ಗೆ ಸಿಎಂ ಬಳಿ ಚರ್ಚಿಸಬೇಕಾಗಿದೆ. ಸಿಎಂ ಕ್ವಾರಂಟೆನ್ ನಲ್ಲಿದ್ದಾರೆ. ಅವರ ಕ್ವಾರಂಟೈನ್ ಅವಧಿ ಮುಗಿದ ಬಳಿಕ ಸಭೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.