ನವದೆಹಲಿ: ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಹೊರ ಬಿದ್ದಿದ್ದು, ನಾಲ್ಕರ ಪೈಕಿ ಮೂರರಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದು, ಒಂದರಲ್ಲಿ ಮಾತ್ರ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಈ ಸೋಲಿನ ಪರಾಮರ್ಶೆ ಕಾಂಗ್ರೆಸ್ ಪಾಳಯದಲ್ಲಿ ನಡೆದಿದ್ದು, ರಾಹುಲ್ ಗಾಂಧಿ ಸ್ಪಷ್ಟನೆ ನೀಡಿದ್ದಾರೆ.
ಜನಾದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಆದರೆ ಸಿದ್ಧಾಂತದ ಕದನ ಮುಂದುವರಿಯುತ್ತದೆ. ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನದ ಜನಾದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ. ಸಿದ್ಧಾಂತದ ಕದನ ಮುಂದುವರಿಯುತ್ತದೆ. ತೆಲಂಗಾಣದ ಜನತೆಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಪ್ರಜಾಳು ತೆಲಂಗಾಣ ಮಾಡುವ ಭರವಸೆ ನಾವು ಖಂಡಿತ ಈಡೇರಿಸುತ್ತೇವೆ ಎಂದು ಹೇಳಿದ್ದಾರೆ.