ದ.ಕ ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಶ್ರೀನಿವಾಸ ಪೂಜಾರಿ ಹೇಳಿದ್ದೇನು?

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿದಿನ ಕೊರೊನಾ ಸ್ಫೋಟವಾಗುತ್ತಿರುವ ಹಿನ್ನೆಲೆ ಈಗಾಗಲೇ ಒಂದು ವಾರದ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದೆ. ಇದನ್ನು ವಿಸ್ತರಿಸುವ ಬಗ್ಗೆ ಜಿಲ್ಲೆಯಲ್ಲಿ ಚರ್ಚೆಗಳು ನಡೆಯುತ್ತಿದ್ದು ಈ ಬಗ್ಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಒಂದು ವಾರಗಳ ಕಾಲ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಮತ್ತೊಂದು ವಾರ ವಿಸ್ತರಣೆ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳು ಒಲವು ತೋರಿದ್ದಾರೆ. ಜಿಲ್ಲಾಡಳಿತ ಈ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದರು.
ಇವತ್ತು ಸಂಜೆ ಮಂಗಳೂರಿನಲ್ಲಿ ಜನಪ್ರತಿನಿಧಿಗಳ ಸಭೆ ನಡೆಸಲಾಗುವುದು. ಅದರಲ್ಲಿ ಲಾಕ್ ಡೌನ್ ವಿಸ್ತರಣೆ ಅಗತ್ಯವೇ ಎಂಬ ಕುರಿತಾಗಿ ಚರ್ಚೆ ನಡೆಸಲಾಗುವುದು. ಬಳಿಕ ನಾಳೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು








