PFI ಬ್ಯಾನ್ ಬಗ್ಗೆ ಗೃಹ ಸಚಿವ ಹೇಳಿದ್ದೇನು ?
ಬೆಂಗಳೂರು : : ಕೇಂದ್ರ ಸರ್ಕಾರ ದೇಶದಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಐದು ವರ್ಷಗಳ ಕಾಲ ಬ್ಯಾನ್ ಮಾಡಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಇದನ್ನ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ವಾಗತಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೇಂದ್ರ ಸರಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ, ಪಿಎಫ್ ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು, ಐದು ವರ್ಷಗಳ ವರೆಗೆ UAPA ಕಾಯಿದೆ ಅಡಿಯಲ್ಲಿ ನಿಷೇಧಿಸಿದೆ. ಇದನ್ನು ನಾನು ಸ್ವಾಗತಿಸುತ್ತೇನೆ.

ದೇಶದಲ್ಲಿ ಕೋಮು ಸೌಹಾರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಪಿಎಫ್ಐ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ.
ಕೇಂದ್ರ ಸರಕಾರ ಬಲವಾದ ಸಾಕ್ಷ್ಯಾಧಾರ ಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿಷೇಧ ಕ್ರಮ ಕೈಗೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ.








