ಬಾಲಿವುಡ್ ಬೆಡಗಿ ಅಥಿಯಾ ಶೆಟ್ಟಿ, ಕೆ.ಎಲ್ ರಾಹುಲ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ ಕುರಿತು ಸುನೀಲ್ ಶೆಟ್ಟಿ ಸುಳಿವು ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಈ ಕುರಿತು ಸುನೀಲ್ ಶೆಟ್ಟಿ ಆಡಿರುವ ಮಾತು ಈಗ ವೈರಲ್ ಆಗುತ್ತಿದೆ.
ಡ್ಯಾನ್ಸ್ ದೀವಾನೆ’ ಶೋನಲ್ಲಿ ನಿರೂಪಕಿ, ಅಜ್ಜನಾಗುವ ಬಗ್ಗೆ ಪ್ರಶ್ನೆ ಮಾಡುತ್ತಾರೆ. ಈ ಸಂದರ್ಭದಲ್ಲಿ ಸುನೀಲ್ ಶೆಟ್ಟಿ, ಮುಂದಿನ ಸೀಸನ್ಗೆ ಬಂದಾಗ ನಾನು ವೇದಿಕೆಯ ಮೇಲೆ ಅಜ್ಜನಂತೆಯೇ ಓಡಾಡುತ್ತೇನೆ ಎಂದು ಹೇಳಿದ್ದಾರೆ. ಸುನೀಲ್ ಶೆಟ್ಟಿ ಈ ಹೇಳಿಕೆ ನೀಡಿದ ನಂತರ ಅಥಿಯಾ ಶೆಟ್ಟಿ ಪ್ರೆಗ್ನೆಂಟ್ ಆಗಿದ್ದಾರಾ? ಹಾಗಾಗಿ ಈ ರೀತಿಯ ಹೇಳಿಕೆ ನೀಡಿದ್ರಾ ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಮದುವೆ ನಂತರ ಸಿನಿಮಾಗಳಿಂದ ನಟಿ ದೂರವಿದ್ದಾರೆ. ಇತ್ತೀಚೆಗೆ ಯಾವುದೇ ಬಾಲಿವುಡ್ಗೆ ಸಂಬಂಧಿಸಿದ ಪಾರ್ಟಿಗಳಲ್ಲಿ ಅಥಿಯಾ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ಅವರು ಪ್ರೆಗ್ನೆನ್ಸಿ ಎಂಬುವುದಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.
ಅಥಿಯಾ ಶೆಟ್ಟಿ- ಕೆ.ಎಲ್ ರಾಹುಲ್ ಮದುವೆಯಾಗಿ ಒಂದು ವರ್ಷ ಕಳೆದಿದೆ. ಹಲವು ವರ್ಷಗಳ ಪ್ರೀತಿಯ ನಂತರ ಅವರು ಮದುವೆಯಾಗಿದ್ದು, ಈಗ ಮೊದಲ ಮಗು ನಿರೀಕ್ಷೆಯಲ್ಲಿದ್ದಾರೆ.