ಸಂಸದರ ಅನರ್ಹತೆ ಬಗ್ಗೆ ಸಂವಿಧಾನ ಏನು ಹೇಳುತ್ತದೆ?
What does the constitution say about the disqualification of MPs?
2019ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಕಾಂಗ್ರೆಸ್ ರಾಹುಲ್ ಗಾಂಧಿ ಕೋಲಾರದಲ್ಲಿ ನಡೆದಿದ್ದ ಬಹಿರಂಗ ಸಭೆಯಲ್ಲಿ, ಅದು ಹೇಗೆ ಮೋದಿ ಹೆಸರಿಟ್ಟುಕೊಂಡವರೆಲ್ಲರೂ ಕಳ್ಳರಾಗುತ್ತಾರೆ ಎಂದು ಹೇಳಿದ್ದರು. ಈ ಹೇಳಿಕೆಯ ವಿರುದ್ಧ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್ ಮಾನನಷ್ಟ ಪ್ರಕರಣವನ್ನು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸೂರತ್‌ನ ಸ್ಥಳೀಯ ನ್ಯಾಯಾಲಯ ರಾಹುಲ್ ಗಾಂಧಿ ಅವರು ಐಪಿಸಿ ಸೆಕ್ಷನ್ 499 ಹಾಗೂ 500ರಡಿಯಲ್ಲಿ ದೋಷಿ ಎಂದು ತೀರ್ಪು ನೀಡಿತ್ತು. ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಮೂರ್ತಿ ಎಚ್‌ಎಚ್ ವರ್ಮಾ ತೀರ್ಪು ಪ್ರಕಟಿಸದ್ದು, ರಾಹುಲ್ ಗಾಂಧಿ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿತ್ತು.
ಇದರಿಂದ ರಾಹುಲ್ ಗಾಂಧಿಯವರು ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು. ಸದ್ಯ ಸುಪ್ರೀಂ ಕೋರ್ಟ್ ಆದೇಶಕ್ಕೆ ತಡೆನೀಡಿದ್ದು, ರಾಹುಲ್ ಗಾಂಧಿ ಮತ್ತೆ ಸಂಸದರಾಗಿದ್ದಾರೆ.
ಹಾಗಿದ್ದರೆ ಸಂಸದರನ್ನು ಯಾಕೆ ಅನರ್ಹಗೊಳಿಸುತ್ತಾರೆ. ಈ ಬಗ್ಗೆ ಜನಪ್ರತಿನಿಧಿಗಳ ಕಾಯ್ದೆ ಏನು ಹೇಳುತ್ತದೆ?
ಜನಪ್ರತಿನಿಧಿಗಳ ಕಾಯ್ದೆಯಂತೆ ಸಂಸದರು ಎರಡು ನಿದರ್ಶನಗಳಲ್ಲಿ ತಮ್ಮ ಸ್ಥಾನದಿಂದ ಅನರ್ಹರಾಗಬಹುದು. ಮೊದಲು ಸೆಕ್ಷನ್ 153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಅಪರಾಧ ಮತ್ತು ಪೂರ್ವಾಗ್ರಹ ಪೀಡಿತ ಕೃತ್ಯಗಳ ಪ್ರಕರಣಗಳಲ್ಲಿ ಅಪರಾಧಿ ಎಂದು ಸಾಬೀತಾದರೆ.
ಮತ್ತು ಸೆಕ್ಷನ್ 171E (ಲಂಚ ತೆಗೆದುಕೊಳ್ಳುವುದು)ನಂತಹ ಪ್ರಕರಣ ಅಥವಾ ಸೆಕ್ಷನ್ 171F (ಚುನಾವಣೆಯಲ್ಲಿ ಅನಗತ್ಯ ಪ್ರಭಾವದ) ಅಪರಾಧ ಪ್ರಕರಣಗಳಲ್ಲಿ ಅಪರಾಧಿ ಎಂದು ಸಾಬೀತಾದರೆ ತಮ್ಮ ಸ್ಥಾನವನ್ನು ಸಂಸದರು ಕಳೆದುಕೊಳ್ಳಲಿದ್ದಾರೆ.








