ಮಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಂಡಿಸಿರುವ ಬಜೆಟ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಲಾಗಿದೆ ಎನ್ನುವ ಸಂಕ್ಷಿಪ್ತ ಅಂಶಗಳು ಇಲ್ಲಿವೆ.
1. ಕರಾವಳಿ ಪ್ರದೇಶದಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ‘ಕಿಂಡಿ ಅಣೆಕಟ್ಟು ಯೋಜನೆ’ಗಳ ವ್ಯಾಪಕ ಅನುಷ್ಠಾನಕ್ಕೆ ಪ್ಲಾನ್.
2. ಮಹಿಳಾ ಮೀನುಗಾರರ ಸಬಲೀಕರಣ ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನ ನೀಡಲು ಐದು ಕೋಟಿ ರೂ. ಅನುದಾನ.
3. ಕುಳಾಯಿಯಲ್ಲಿ ನಿರ್ಮಿಸಲಾಗುತ್ತಿರುವ ಬಂದರಿನಲ್ಲಿ 12.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಕರಾವಳಿ ಮೀನು ರಫ್ತು ಸ್ಥಾವರ ಸ್ಥಾಪನೆ.
4. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಜವುಳಿ ಪಾರ್ಕ್.
5. ಉಡುಪಿಯ ಅಂಗಾರು ಕಟ್ಟೆ ಬಂದರು ಅಭಿವೃದ್ಧಿಗೆ 130 ಕೋಟಿ ರೂ. ಅನುದಾನ.
6. ಉಡುಪಿಯ ಹೆಜಮಾಡಿಕೋಡಿಯಲ್ಲಿ ಪರಿಷ್ಕೃತ ಅಂದಾಜು ವೆಚ್ಚ 181 ಕೋಟಿ ರೂ.ಗಳಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ.
7. ಬೈಂದೂರು ತಾಲೂಕಿನ ಮರವಂತೆಯ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು 85 ಕೋಟಿ ರೂ. ಅನುದಾನ
8.. ಉಡುಪಿಯಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ ನಾಲ್ಕು ಕೋಟಿ ರೂ. ಅನುದಾನ
9. ಮುಲ್ಕಿಯಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆ.
10. 1.5 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ ಜಾರಿ.
11. ರೈತ ಕುಟುಂಬಕ್ಕೆ ನೀಡುವ ದೀರ್ಘಾವಧಿ ಕೃಷಿ ಸಾಲದ ಪೈಕಿ ಗರಿಷ್ಠ ಎರಡು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.5 ರಷ್ಟು ಬಡ್ಡಿ ವಿನಾಯಿತಿ