ಬೆಂಗಳೂರು: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗೆ ಇಲಾಖೆಯು ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಕುರಿತು ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ.
ಮಾ. 1 ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮಾರ್ಚ್ 25 ರಿಂದ ಏಪ್ರಿಲ್ 6ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿವೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 6,98,624 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. ಈ ಪೈಕಿ ಬಾಲಕರು 3,30,644, ಬಾಲಕಿಯರು 3,67,980 ಜನ ಪರೀಕ್ಷೆಯ ಬರೆಯಲಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಒಟ್ಟು 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. 4,58,427 ಬಾಲಕರು, 4,37,844 ಬಾಲಕಿಯರು ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ದ್ವಿತೀಯ ಪಿಯುಸಿ ಪಅಂಕ ಮಾದರಿಯಲ್ಲಿ ಬದಲಾವಣೆ ಮಾಡಿದ್ದು, 80+20 ಅಂಕ ಮಾದರಿ ಜಾರಿ ಮಾಡುತ್ತಿದೆ. 80 ಅಂಕ ಲಿಖಿತ ಪರೀಕ್ಷೆ. ಆಂತರಿಕ ಮೌಲ್ಯಮಾಪನಕ್ಕೆ 20 ಅಂಕ ನಿಗದಿ ಮಾಡಲಾಗಿದೆ. 2015ರಿಂದ ಎಸ್ಸೆಸ್ಸೆಲ್ಸಿಯಲ್ಲಿ 80+20 ಅಂಕ ಮಾದರಿ ಜಾರಿ ಮಾಡಲಾಗಿದ್ದು, ಈ ವರ್ಷದಿಂದ ದ್ವಿತೀಯ ಪಿಯುಸಿಯಲ್ಲೂ 80+20 ಅಂಕ ಮಾದರಿ ಜಾರಿ ಮಾಡಲಾಗುತ್ತಿದೆ. ಈ ಬಾರಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಪೋಸ್ಟರ್ ಸಿದ್ಧಪಡಿಸಲಾಗಿದೆ ಎಂದು ಹೇಳಿದ್ದಾರೆ.