ರಾಜ್ಯ ಸರ್ಕಾರವು ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2023 (Rajyotsava 2023) ಪಟ್ಟಿ ಪ್ರಕಟಿಸಿದ್ದು, ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರ ಹೆಸರು ಘೋಷಿಸಿದೆ.
ಸಿನಿಮಾ ಕ್ಷೇತ್ರದಲ್ಲಿ ಡಿಂಗ್ರಿ ನಾಗರಾಜ್ (Dingri Nagaraj) ಮತ್ತು ಬ್ಯಾಂಕ್ ಜನಾರ್ದನ್ (Bank Janardhan) ಅವರ ಹೆಸರು ಅಂತಿಮಗೊಳಿಸಲಾಗಿದೆ. ಸಂಕೀರ್ಣ ವಿಭಾಗದಲ್ಲಿ ಮಿಮಿಕ್ರಿ ದಯಾನಂದ್ ಆಯ್ಕೆಯಾಗಿದ್ದಾರೆ.
ಶಿಲ್ಪಕಲೆ/ ಚಿತ್ರಕಲೆ/ ಕರಕುಶಲ ಕ್ಷೇತ್ರ: ಟಿ ಶಿವಶಂಕರ್, ಕಾಳಪ್ಪ ವಿಶ್ವಕರ್ಮ, ಮಾರ್ಥಾ ಜಾಕಿಮೋವಿಚ್ ಮತ್ತು ಪಿ ಗೌರಯ್ಯ. ಸಂಗೀತ/ನೃತ್ಯ ಕ್ಷೇತ್ರ: ಡಾ. ನಯನ ಎಸ್ ಮೋರೆ, ಶ್ರೀಮತಿ ನೀಲಾ ಎಂ ಕೊಡ್ಲಿ, ಶ್ರೀ ಶಬ್ಬೀರ್ ಅಹಮದ್, ಡಾ. ಎಸ್ ಬಾಳೇಶ ಭಜ್ರಂತಿ ಅವರಿಗೆ ಪ್ರಶಸ್ತಿ ಲಭಿಸಿದೆ. ಯಕ್ಷಗಾನ/ಬಯಲಾಟ ಕ್ಷೇತ್ರ: ಅರ್ಗೋಡು ಮೋಹನದಾಸ್ ಶೆಣೈ, ಕೆ ಲೀಲಾವತಿ ಬೈಪಾಡಿತ್ತಾಯ, ಕೇಶಪ್ಪ ಶಿಳ್ಳಿಕ್ಯಾತರ, ದಳವಾಯಿ ಸಿದ್ದಪ್ಪ (ಹಂದಿಜೋಗಿ).
ಸಮಾಜಸೇವೆ ಕ್ಷೇತ್ರ: ಹುಚ್ಚಮ್ಮ ಬಸಪ್ಪ ಚೌದ್ರಿ, ಚಾರ್ಮಾಡಿ ಹಸನಬ್ಬ, ರೂಪಾ ನಾಯಕ್, ನಿಜಗುಣಾನಂದ ಮಹಾಸ್ವಾಮಿಗಳು, ನಾಗರಾಜು ಜಿ, ರಂಗಭೂಮಿ ಕ್ಷೇತ್ರ: ಎಜಿ ಚಿದಂಬರ ರಾವ್ ಜಂಬೆ, ಪಿ ಗಂಗಾಧರ ಸ್ವಾಮಿ, ಹೆಚ್ಬಿ ಸರೋಜಮ್ಮ, ತಯ್ಯಬಖಾನ್ ಎಂ ಇನಾಮದಾರ, ವಿಶ್ವನಾಥ್ ವಂಶಾಕೃತ ಮಠ, ಪಿ ತಿಪ್ಪೇಸ್ವಾಮಿ. ಜಾನಪದ ಕ್ಷೇತ್ರ: ಹುಸೇನಬಿ ಬುಡೆನ್ ಸಾಬ್ ಸಿದ್ದಿ, ಶಿವಂಗಿ ಶಣ್ಮರಿ, ಮಹದೇವು, ನರಸಪ್ಪಾ, ಶಕುಂತಲಾ ದೇವಲಾನಾಯಕ, ಹೆಚ್ಕೆ ಕಾರಮಂಚಪ್ಪ, ಶಂಭು ಬಳಿಗಾರ, ವಿಭೂತಿ ಗುಂಡಪ್ಪ, ಚೌಡಮ್ಮ..
ಶಿಕ್ಷಣ ಕ್ಷೇತ್ರ: ರಾಮಪ್ಪ (ರಾಮಣ್ಣ) ಹವಳೆ, ಕೆ ಚಂದ್ರಶೇಖರ್, ಕೆಟಿ ಚಂದು., ಆಡಳಿತ ಕ್ಷೇತ್ರ: ಜಿವಿ ಬಲರಾಮ್, ವೈದ್ಯಕೀಯ ಕ್ಷೇತ್ರ: ಡಾ. ಸಿ ರಾಮಚಂದ್ರ, ಡಾ. ಪ್ರಶಾಂತ್ ಶೆಟ್ಟಿ. ಸಾಹಿತ್ಯ ಕ್ಷೇತ್ರ: ಪ್ರೊ. ಸಿ ನಾಗಣ್ಣ, ಸುಬ್ಬು ಹೊಲೆಯಾರ್ (ಹೆಚ್ಕೆ ಸುಬ್ಬಯ್ಯ), ಸತೀಶ್ ಕುಲಕರ್ಣಿ, ಲಕ್ಷ್ಮೀಪತಿ ಕೋಲಾರ, ಪರಪ್ಪ ಗುರುಪಾದಪ್ಪ ಸಿದ್ದಾಪುರ, ಡಾ. ಕೆ ಷರೀಫಾ., ಕ್ರೀಡಾ ಕ್ಷೇತ್ರ: ದಿವ್ಯ ಟಿಎಸ್, ಅದಿತಿ ಅಶೋಕ್, ಅಶೋಕ್ ಗದಿಗೆಪ್ಪ ಏಣಗಿ.
ಮಾಧ್ಯಮ ಕ್ಷೇತ್ರ: ದಿನೇಶ ಅಮೀನ್ಮಟ್ಟು, ಜವರಪ್ಪ, ಮಾಯಾ ಶರ್ಮ, ರಫೀ ಭಂಡಾರ., ವಿಜ್ಞಾನ/ ತಂತ್ರಜ್ಞಾನ ಕ್ಷೇತ್ರ: ಎಸ್. ಸೋಮನಾಥ್ ಶ್ರೀಧರ್ ಪನಿಕರ್, ಪ್ರೊ. ಗೋಪಾಲನ್ ಜಗದೀಶ್, ನ್ಯಾಯಾಂಗ ಕ್ಷೇತ್ರ: ವಿ ಗೋಪಾಲಗೌಡ., ಕೃಷಿ-ಪರಿಸರ ಕ್ಷೇತ್ರ: ಸೋಮನಾಥರೆಡ್ಡಿ ಪೂರ್ಮಾ, ದ್ಯಾವನಗೌಡ ಟಿ. ಪಾಟೀಲ, ಶಿವರೆಡ್ಡಿ ಹನುಮರೆಡ್ಡಿ ವಾಸನ., ಸಂಕೀರ್ಣ ಕ್ಷೇತ್ರ: ಎಎಂ ಮದರಿ, ಹಾಜಿ ಅಬ್ದುಲ್ಲಾ ಪರ್ಕಳ, ಮಿಮಿಕ್ರಿ ದಯಾನಂದ್, ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್, ಕೊಡನ ಪೂವಯ್ಯ ಕಾರ್ಯಪ್ಪ., ಹೊರನಾಡು/ ಹೊರದೇಶ ಕ್ಷೇತ್ರ: ಸೀತಾರಾಮ ಅಯ್ಯಂಗಾರ್, ದೀಪಕ್ ಶೆಟ್ಟಿ, ಶಶಿಕಿರಣ್ ಶೆಟ್ಟಿ., ಸ್ವಾತಂತ್ರ್ಯ ಹೋರಾಟಗಾರ ಕ್ಷೇತ್ರ: ಪುಟ್ಟಸ್ವಾಮಿ ಗೌಡ ಅವರಿಗೆ ಪ್ರಶಸ್ತಿ ಸಂದಿದೆ.








