ಬೆಂಗಳೂರು: ಕಾಂಗ್ರೆಸ್ಸಿಗರು ಮಾಡುತ್ತಿರುವ ಸಮಾವೇಶಕ್ಕೆ ಹಣ ಎಲ್ಲಿಂದ ಬಂತು ಎಂಬುವುದನ್ನು ಸ್ಪಷ್ಟಪಡಿಸಬೇಕು ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಖಾತೆಯಿಂದ ಹಣ ಖರ್ಚು ಮಾಡಲಾಗಿದೆಯೇ? ಅಥವಾ ನೀವು ಸರ್ಕಾರದ ಬೊಕ್ಕಸದಿಂದ ಖರ್ಚು ಮಾಡಿದ್ದೀರಾ? ಎಂಬುವುದನ್ನು ಜನರಿಗೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರಿ ಬೊಕ್ಕಸದಿಂದ ಗಾಂಧಿ ಪ್ರತಿಮೆ ಪ್ರತಿಷ್ಠಾಪನೆಗೆ ನಮ್ಮ ವಿರೋಧವಿಲ್ಲ. ಇದು ಮಹಾತ್ಮ ಗಾಂಧಿಯವರ ಕಾಲದ ಕಾಂಗ್ರೆಸ್ ಪಕ್ಷ ಅಲ್ಲ. ಮಹಾತ್ಮ ಗಾಂಧಿ ಸಿದ್ಧಾಂತಕ್ಕೂ ಇವತ್ತಿನ ಗಾಂಧಿಗಳ ಕಾಂಗ್ರೆಸ್ಸಿನ ಸಿದ್ಧಾಂತಕ್ಕೂ ದೊಡ್ಡ ವ್ಯತ್ಯಾಸವಿದೆ. ಗಾಂಧಿ ಕಾಂಗ್ರೆಸ್ ಪಕ್ಷಕ್ಕೆ ಯಾರು ಮದ್ಯಪಾನ ಮಾಡುತ್ತಿದ್ದರೋ ಅವರು ಸದಸ್ಯರಾಗುವ ಹಾಗಿರಲಿಲ್ಲ. ಆದರೆ, ಈಗಿನ ಕಾಂಗ್ರೆಸ್ಸಿನವರು ರಾತ್ರಿಯಿಡೀ ಕುಡಿದು ಮಲಗಿದ್ದು, ಬೆಳಗ್ಗೆ ಸಮಾವೇಶ ಮಾಡುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.








