18-09-2024 ಬುಧವಾರದಿಂದ 02-10-2024 ಬುಧವಾರದ ತನಕ
ಲೇಖನ ಬರಹಗಾರರು ಜ್ಞಾನೇಶ್ವರ್ ರಾವ್ ತಂತ್ರಿ ಜ್ಯೋತಿಷ್ಯ ಶಾಸ್ತ್ರತಜ್ಞರು
ಮರಣಾನಂತರ ಜೀವಿಗೆ ತನ್ನ ಕರ್ಮಾನುಸಾರ ಮುಂದಿನ ಗತಿ ಪ್ರಾಪ್ತಿಯಾಗುತ್ತದೆ
ಅವರಿಗೆ ಶ್ರಾದ್ಧಕರ್ಮಗಳಲ್ಲಿನ ಪಿಂಡಪ್ರದಾನ….
ತರ್ಪಣಗಳು ಏಕೆ ಬೇಕು?
ಯಾವುದೋ ರೂಪದಲ್ಲಿ ಬೇರೆಯಲ್ಲಿಯೋ ಜನ್ಮ ಪಡೆದ ನಮ್ಮ ಹಿರಿಯರಿಗೆ ನಾವು ಪಿಂಡಪ್ರದಾನ ಮಾಡುವುದರ ಅವಶ್ಯಕತೆಯೇನು?
ದೇಹತ್ಯಾಗದ ನಂತರ ಆತ್ಮ ಪರಮಾತ್ಮನಲ್ಲಿ ಐಕ್ಯವಾದ ಮೇಲೆ ಜೀವಿಯ ಆತ್ಮಕ್ಕೆ ಪ್ರತ್ಯೇಕ ಅಸ್ತಿತ್ವವೆಲ್ಲಿದೆ? ಹೀಗಾಗಿ ಇಲ್ಲಿಯೂ ಶ್ರಾದ್ಧದ ಪ್ರಮೇಯವೇನು?
ಸಾಮಾನ್ಯವಾಗಿ ಸಮಾಜದಲ್ಲಿ ಆಸಕ್ತರಿಗೆ ಪಿತೃಶ್ರಾದ್ಧಾದಿ ಕಾರ್ಯ ಒಂದು ಕರ್ತವ್ಯವೆಂತಲೂ, ಅದನ್ನು ಶ್ರದ್ಧೆಯಿಂದ ಮಾಡಬೇಕೆಂತಲೂ ನಂಬಿಕೆಯಿದೆ. ಇದು ಸಾರ್ಥಕ ನಂಬಿಕೆ. ತಲತಲಾಂತರದಿಂದ ಆಚರಿಸಿಕೊಂಡು ಬರುತ್ತಿದ್ದಾರೆ ಆಸ್ತಿಕ ಜನರು. ಆದರೆ ಆಚರಣೆಗಳನ್ನು ನೋಡಿ ಹೀಗೆಳೆಯುವ, ನಿಂದೆ ಮಾಡುವ ವರ್ಗವೂ ಇದೆ. ಇದೇಕೆ ಮಾಡಬೇಕು? ಇದರಿಂದೇನು ಉಪಯೋಗ? ಎಂದು ಹಾಸ್ಯ ಮಾಡುವ ಜನರಿಗೂ ಕೊರತೆ ಇಲ್ಲ. ಅವರಿಗೆ ಉತ್ತರಿಸುವ ಉದ್ದೇಶವೂ ನನ್ನದಲ್ಲ. ಆಸ್ತಿಕರಾದ ಜನರಿಗೆ ಅವರ ಪಿತೃಭಕ್ತಿಯ ಜೊತೆಯಲ್ಲಿ ಶ್ರದ್ಧೆ ಹೆಚ್ಚಾಗಲಿ ಎನ್ನುವ ಉದ್ದೇಶದಿಂದ ಶ್ರಾದ್ಧ ಸಾಫಲ್ಯತೆಯ ಕುರಿತು ಈ ಎರಡು ಮಾತನ್ನು ಬರೆಯುತ್ತಿದ್ದೇನೆ. ಇದನ್ನು ಓದಿದ ಪಿತೃಭಕ್ತಿ ಪರಾಯಣರಾದ ಶ್ರದ್ಧಾಳುಗಳು ಇನ್ನೂ ಹೆಚ್ಚಿನ ಶ್ರದ್ಧೆಯಿಂದ ತಮ್ಮ ತಂದೆತಾಯಿಯರ ಮೃತತಿಥಿ ಅಥವಾ ಪುಣ್ಯತಿಥಿ ಆಚರಿಸೋಣ.
ಪಿತೃಶ್ರಾದ್ಧದ ಮುಖ್ಯ ಉದ್ದೇಶವೇನು?
ಇಲ್ಲಿ ಪಿತೃವೆಂದರೆ ಯಾರು? ಯಾವುದು? ಅದೇಕೆ ಗೌರವಾನ್ವಿತ ಹಾಗೂ ಪೂಜನೀಯವಾಯ್ತು? ಅದು ವ್ಯಕ್ತಿಯೇ? ದೇಹವೇ? ಶಕ್ತಿಯೇ? ತತ್ವವೇ? ಚಿಂತಿಸೋಣ.
ಸಾಮಾನ್ಯವಾಗಿ ಸೂತ್ರಕಾರರ ಅಭಿಮತದಂತೆ ಪಿತೃ ಎಂಬುದು ಒಂದು ಸ್ಥಾನ, ಹುದ್ದೆ. ಅದಕ್ಕೆ ಅದರದ್ದೇ ಆದ ಜವಾಬ್ದಾರಿ, ಬದ್ಧತೆ ಇರುತ್ತದೆ. ಅದನ್ನು ಹುಟ್ಟಿದ ಪ್ರತಿಯೊಂದು ಜೀವಿಯೂ ಹೊಂದಲೇ ಬೇಕಾದ ಹುದ್ದೆ. ಅದನ್ನು ಪಡೆಯಲು, ಜವಾಬ್ದಾರಿಯುತವಾಗಿ ನಿರ್ವಹಿಸಲು ಅಸಮಾನ್ಯ ಜ್ಞಾನವು ಬೇಕು. ಆ ಜ್ಞಾನವು ಅನುಭವದಿಂದ ಮಾತ್ರ ಪ್ರಾಪ್ತವಾಗುವಂತಹದ್ದು. ಕಲಿಕೆಯಿಂದ ಬರುವಂತಹದ್ದಲ್ಲ. ಅಂತಹಾ ಹುದ್ದೆಯನ್ನು ಅಲಂಕರಿಸಿದ್ದಾರೆ ನಮ್ಮ ಭೌತಿಕ ವ್ಯಾವಹಾರಿಕ ಪ್ರಪಂಚದ ಪಿತೃಗಳು. ಅಂದರೆ ಭಾವನಾತ್ಮಕ ತಂದೆಯೆಂದು ಅರ್ಥ. ವ್ಯಕ್ತಿಗತವಾಗಿ ಆ ಸ್ಥಾನವನ್ನು ಸಮರ್ಥವಾಗಿ ಅವರು ನಿರ್ವಹಿಸಿದ್ದಾರೆ ಎಂದು ಹೇಳುವ ಅರ್ಹತಾ ಪತ್ರವೇ ನಾವು. ಹಾಗಿದ್ದಾಗ ಅವರ ನಿರ್ವಹಣೆಯಲ್ಲಿ ಅನರ್ಹರು ಎಂದರೆ ನಾವು ಅನರ್ಹರು ಎಂದೇ ಅರ್ಥ.
ಅಂತಹಾ ಪಿತೃಸ್ಥಾನ ಪಟ್ಟವು ಪ್ರತಿಯೊಬ್ಬ ಜೀವಿಯೂ ಬಯಸಿ ಪಡೆಯುವ ಪಟ್ಟ. ಅದರ ಮಹತ್ವವೆಷ್ಟಿರಬಹುದು ಚಿಂತಿಸಿ? ಅದನ್ನು ಪಡೆದು ನಿರ್ವಹಿಸಿ, ಯಶಸ್ವಿಯಾಗಿ ನಮ್ಮನ್ನು ಈ ಲೋಕಕ್ಕೆ, ಸಮಾಜಕ್ಕೆ ಕೊಟ್ಟು ತಾವು ತೇರ್ಗಡೆಯಾಗಿ ವಿರಮಿಸಿದ ತಂದೆತಾಯಿಯ ಸ್ಥಾನ ಪೂಜಾರ್ಹವಲ್ಲವೇ ಚಿಂತಿಸಿ? ಅಂತಹಾ ಸ್ಥಾನವನ್ನು ಗೌರವಿಸುವುದು ಧರ್ಮವಲ್ಲವೇ? ಇದು ಶ್ರಾದ್ಧದ ಹಿನ್ನಲೆಯಲ್ಲಿರುವ ಮಾನವೀಯ ಧರ್ಮ.
ಇನ್ನು ಮೃತಾನಂತರ ಪುನರ್ಜನ್ಮ. ಅವರಿಗೇಕೆ ತರ್ಪಣ? ಪಿಂಡಪ್ರಧಾನ ಎಂಬ ಪ್ರಶ್ನೆಗಳಿವೆ. ಜನರೇ, ಈ ದೃಷ್ಟಿಯಿಂದ ಚಿಂತಿಸಬೇಕು – ತಂದೆಯು ಮೃತನಾಗುವುದಿಲ್ಲ, ದೇಹ ಮಾತ್ರ ನಾಶವಾಗಿದೆ. ತಂದೆಯು ಪುನರ್ಜನ್ಮ ಪಡೆದಿಲ್ಲ, ಆತ್ಮವು ಮಾತ್ರ ಪಡೆದಿದೆ. ತಂದೆ ಎಂಬ ಸ್ಥಾನ ಅಸ್ತಿತ್ವ ಕಳೆದುಕೊಳ್ಳುವುದಿಲ್ಲ, ತಂದೆಯಾಗಿಯೇ ಉಳಿದಿರುತ್ತಾರೆ. ಆತ್ಮವು ಮಾತ್ರ ಪುನರ್ಜನ್ಮ ಪಡೆದು ಹುಟ್ಟಿಬರಬಹುದು. ಆದರೆ ಅದು ಪ್ರಾಣಿಯಾಗಿ ಹುಟ್ಟಿತು ಎಂದು ಯಾರೂ ಪ್ರಸಕ್ತಕಾಲದ ವಿಳಾಸ ಹೇಳುವಾಗ ತನ್ನ ತಂದೆಯು ಪ್ರಾಣಿಯಾಗಿ ಪುನರ್ಜನ್ಮ ಪಡೆದಿದ್ದಾರೆ ಎಂದು ಗೊತ್ತಿದ್ದರೂ ತಾನು ಪ್ರಾಣಿಯ ಮಗನೆಂದು ತನ್ನ ಹೆಸರಿನ ಮುಂದೆ ಸೇರಿಸಿಕೊಳ್ಳುವುದಿಲ್ಲ. ಪುನರ್ಜನ್ಮ ಸಿಕ್ಕಿದೆಯೋ, ಬಿಟ್ಟಿದೆಯೇ ಅದು ಬೇರೆಯ ವಿಚಾರ. ಈ ಶ್ರಾದ್ಧವನ್ನು ಮಾಡಬೇಕಾದ ಮಗನು ಬದುಕಿರುವವರೆಗೆ, ತಂದೆ ಎಂಬ ಭಾವನಾತ್ಮಕ ಅಸ್ತಿತ್ವವು ಪುನರ್ಜನ್ಮ ಪಡೆಯುವುದಿಲ್ಲ. ಆ ಪಟ್ಟ ಈ ಮಗನಿಗೆ ಸಿಗದೇ ಇರಬಹುದು. ಅಲ್ಲಿಂದ ಮುಂದೆ ಹುಟ್ಟಿದ ಆ ಮಗನಿಂದ ಶ್ರಾದ್ಧವಿಲ್ಲ, ಬೇಕಿಲ್ಲ. ಆದರೆ ತಂದೆಯ ಸ್ಥಾನ ನಿರ್ವಹಿಸಿದ ಈ ಬ್ರಹ್ಮಚಾರೀ ಮಗನನ್ನಾದರೂ ಈ ಭೂಮಿಗೆ ಕೊಟ್ಟ ತಂದೆಯು ತನ್ನ ಸ್ಥಾನ ನಿರ್ವಹಣೆ ಮಾಡಿದ್ದಾರೆ. ಅಲ್ಲಿಯವರೆಗೆ ಶ್ರಾದ್ಧ ಸಾಧುವೇ, ಸತ್ಯವೇ, ನ್ಯಾಯವೇ ಆಗಿರುತ್ತದೆ. ಅದು ಈ ಮಗನ ಅಸ್ತಿತ್ವವನ್ನು ಉಳಿಸಿಕೊಡುತ್ತದೆ ನೆನಪಿರಲಿ.
ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ,ದೇವಸ್ಥಾನ ಕಟೀಲು
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ 8548998564 ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564
ಇಲ್ಲಿಯವರೆಗೆ ಪಿತೃಸ್ಥಾನ ಮತ್ತು ಮಗನ ಕರ್ತವ್ಯ ನಿರ್ವಹಣೆ. ಪ್ರತೀ ಜೀವಿಯೂ ಒಂದೊ ತಂದೆಯಾಗಿ ಅಥವಾ ತಾಯಿಯಾಗಿ ಸಾಫಲ್ಯತೆ ಕಾಣುವ ನಮ್ಮ ಆಧ್ಯಾತ್ಮಿಕ, ದೈವೀಕ ನೆಲೆಗಟ್ಟಿನ ಸಮಾಜ ಜೀವನದ ಪರಮೋನ್ನತ ಪದವಿ ತಂದೆ-ಯಾ- ತಾಯಿ. ಈ ಪದವಿಗಾಗಿ ಪ್ರತೀಜೀವಿಯೂ ಹಾರೈಸುತ್ತದೆ. ಅಂತಹಾ ಪದವಿ ಆಕಾಂಕ್ಷೆಯಾದ ಪ್ರತೀಜೀವಿಯೂ ಆ ಸ್ಥಾನವನ್ನು ಶ್ರದ್ಧೆಯಿಂದ ಗೌರವಿಸಿದರೆ ನಿಸ್ತಂತುವಾಗಿ ವಂಶ ಬೆಳೆಯುತ್ತದೆ. ಇಲ್ಲವಾದರೆ ಮುಂದೆ ಸಂತಾನ ಲಭ್ಯವಿಲ್ಲದೆ ವಂಶ ನಿಂತು ಹೋಗಬಹುದು. ಆದ್ದರಿಂದ ಶ್ರಾದ್ಧ, ತರ್ಪಣ, ಪ್ರತಿಯೊಬ್ಬರ ಮುಖ್ಯ ಕರ್ತವ್ಯ. ಅದು ಆ ಸ್ಥಾನವನ್ನು ಗೌರವಿಸಿದಂತೆ.
ಕಚ್ಚಾಡುವ ಮನೆ, ಕಾದಾಡುವ ಮಕ್ಕಳು, ಅಶಾಂತಿ-ಅತೃಪ್ತಿಯ ಗೃಹವಾಸ, ಇವೆಲ್ಲವುಗಳಿಗೆ ಕಾರಣ “ಪಿತೃಶಾಪ” ಎನ್ನುತ್ತದೆ ಜ್ಯೋತಿಃಶಾಸ್ತ್ರ. ಪಿತೃಕಾರ್ಯಗಳು ಸರಿಯಾಗಿ ನಡೆಯದಿದ್ದರೆ ಮೇಲ್ಕಂಡ ಸ್ಥಿತಿ ಏರ್ಪಡುತ್ತದೆ ಎಂದರ್ಥ.
ಸಂವತ್ಸರ ಪೂರ್ತಿ ಪಿತೃದೇವತೆಗಳು ಸಂತುಷ್ಟರಾಗಿರಬೇಕಾದರೆ ಭಾದ್ರಪದಮಾಸದ ಕೃಷ್ಣಪಕ್ಷದಲ್ಲಿ ಪಿತೃಗಳನ್ನು ಎಲ್ಲರೂ ನೆನೆಯಬೇಕು .
ಪಿತೃಪ್ರಾರ್ಥನೆ :
ಅಮೂರ್ತಾನಾಂ ಸುಮೂರ್ತಾನಾಂ ಪಿತೃಣಾಂ ದೀಪ್ತತೇಜಸಾಮ್ |
ನಮಸ್ಯಾಮಿ ಸದಾ ಭಕ್ತ್ಯಾ ಧ್ಯಾಯಿನಾಂ ಯೋಗಚಕ್ಷುಸಾಮ್ ||
ದೇವತಾಭ್ಯಃ ಪಿತೃಭ್ಯಶ್ಚ ಮಹಾಯೋಗಿಭ್ಯ ಏವ ಚ |
ನಮಃ ಸ್ವಧಾಯೈ ಸ್ವಾಹಾಯೈ ನಿತ್ಯಮೇವ ನಮೋ ನಮಃ