ಮೆಟಾ (Meta) ಒಡೆತನದ ವಾಟ್ಸ್ಆ್ಯಪ್ ಮೇ ತಿಂಗಳಲ್ಲಿ ಬರೋಬ್ಬರಿ 65 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ.
2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್ಆ್ಯಪ್ ಈ ನಿರ್ಧಾರ ತೆಗೆದುಕೊಂಡಿದೆ. ವಾಟ್ಸ್ಆ್ಯಪ್ (WhatsApp) ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 6,508,000 ವಾಟ್ಸ್ಆ್ಯಪ್ ಖಾತೆಗಳನ್ನು ಬ್ಯಾನ್ (Ban) ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಏಪ್ರೀಲ್ ತಿಂಗಳಲ್ಲಷ್ಟೇ 74 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್ಆ್ಯಪ್ ಹೇಳಿತ್ತು.
ಬ್ಯಾನ್ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ ಎನ್ನಲಾಗಿದೆ.
ವಾಟ್ಸ್ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ.








