ವಾಟ್ಸ್ಆ್ಯಪ್ ಅಪ್ಲಿಕೇಶನ್ ತನ್ನ ಬಳಕೆದಾರರಿಗೆ ಈಗಾಗಲೇ ಹಲವು ಫೀಚರ್ಗಳನ್ನು ಪರಿಚಯಿಸಲು ಮುಂದಾಗಿದೆ. ಬಳಕೆದಾರರ ಖಾತೆ ಸುರಕ್ಷತೆಗೆ ಕೆಲವು ಫೀಚರ್ಸ್ ಇದ್ದರೂ ಕೆಲವೊಮ್ಮೆ ವಾಟ್ಸ್ಆ್ಯಪ್ ಹ್ಯಾಕ್ ಆಗುವ ಸಾಧ್ಯತೆಗಳು ಇರುತ್ತವೆ. ಬಳಕೆದಾರರಿಗೆ ಗೊತ್ತಿಲ್ಲದೇ ಅವರ ವಾಟ್ಸ್ಆ್ಯಪ್ ಚಾಟ್ ಅನ್ನು ಬೇರೆಯವರು ಜಾಲಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹೊಸ ಫೀಚರ್ ಬಿಡುಗಡೆ ಮಾಡಿದೆ.
ವಾಟ್ಸ್ಆ್ಯಪ್ ಖಾತೆಯನ್ನು ಇತರೆ ಡಿವೈಸ್ಗಳಲ್ಲಿ ಬಳಕೆ ಮಾಡಬಹುದಾಗಿದೆ. ಇದೊಂದು ಅನುಕೂಲಕರ ಫೀಚರ್ ಆಗಿದ್ದರೂ ಕೆಲವೊಮ್ಮೆ ಸಮಸ್ಯೆ ಎನಿಸಬಹುದು. ಕಂಪ್ಯೂಟರ್ ಗಳಲ್ಲಿಯೂ ವಾಟ್ಸ್ಆ್ಯಪ್ ಬಳಸುತ್ತಿರುವವರ ಸಂಖ್ಯೆ ಹೆಚ್ಚಿದೆ. ನಮ್ಮ ಖಾತೆ ಎಲ್ಲಿ ಲಾಗಿನ್ ಆಗಿರುತ್ತದೆ ಎಂಬುದು ಅರಿವಿಗೆ ಬರುವುದಿಲ್ಲ.
ಕೆಲವೊಮ್ಮೆ ಬಳಕೆದಾರರ ತಪ್ಪಿನಿಂದಲೇ ಬೇರೆಯವರು ಅವರ ವಾಟ್ಸ್ಆ್ಯಪ್ ಚಾಟ್/ ಮೀಡಿಯಾ ಫೈಲ್ಸ್ ವೀಕ್ಷಿಸುತ್ತಾರೆ. ಅಂದರೆ ಬಳಕೆದಾರರ ತಪ್ಪಿನಿಂದಲೇ ಅವರ ವಾಟ್ಸ್ಆ್ಯಪ್ ಹ್ಯಾಕ್ ಆಗುವ ಚಾನ್ಸ್ ಇರುತ್ತವೆ. ಹ್ಯಾಕ್ ಆದ ವಾಟ್ಸ್ಆ್ಯಪ್ ಕೆಲವೊಮ್ಮೆ ದುರುಪಯೋಗ ಕೂಡಾ ಆಗಬಹುದು. ಹೀಗಾಗಿ ವಾಟ್ಸ್ಆ್ಯಪ್ನಲ್ಲಿಯೇ ಈ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಈ ಹೊಸ ಫೀಚರ್ ಇದನ್ನು ತಿಳಿಸುತ್ತದೆ.