ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆ ನಡೆದಿದ್ದು, ಇಡೀ ದೇಶವಷ್ಟೇ ಅಲ್ಲದೇ, ಜಗತ್ತೇ ಕಾತುರದಿಂದ ಆ ಘಳಿಗಾಗಿ ಕಾಯುತ್ತಿದೆ.
ಶುಭ ಮುಹೂರ್ತ 12.29 ರಿಂದ 12.30 ರ ವರೆಗೆ (32 ಸೆಕೆಂಡುಗಳು) ಇರಲಿದ್ದು, ಪ್ರಾಣ ಪ್ರತಿಷ್ಠಾಪನೆಯ ಶುಭ ಸಮಯ ಕೇವಲ 84 ಸೆಕೆಂಡುಗಳು ಮಾತ್ರ ಇರಲಿದೆ. ಈ ಅವಧಿಯಲ್ಲಿಯೇ ಕಾರ್ಯಕ್ರಮ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಷ್ಠಾಪನೆಯ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಿದ್ದು, ಶ್ರೀರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯನ್ನೂ ನೆರವೇರಿಸಲಿದ್ದಾರೆ. ಕಾಶಿಯ ವೈದಿಕ ಆಚಾರ್ಯ ಗಣೇಶ್ವರ್ ದ್ರಾವಿಡ್ ಹಾಗೂ ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆಯಲಿವೆ.
ಈ ಪ್ರಮುಖ ಅರ್ಚಕರ ನೇತೃತ್ವದಲ್ಲಿ 121 ವೈದಿಕ ಆಚಾರ್ಯರಿಂದ ಧಾರ್ಮಿಕ ಕ್ರಿಯೆ ನಡೆಯಲಿದೆ. ಈ ಸಂದರ್ಭದಲ್ಲಿ 150ಕ್ಕೂ ಅಧಿಕ ಸಂಪ್ರದಾಯಗಳು, 50ಕ್ಕೂ ಅಧಿಕ ಬುಡಕಟ್ಟು, ಕರಾವಳಿ, ದ್ವೀಪ, ಬುಡಕಟ್ಟು ಸಂಪ್ರದಾಯಗಳ ಸಂತರು ಹಾಗೂ ಧಾರ್ಮಿಕ ಮುಖಂಡರು ಹಾಜರಿರಲಿದ್ದಾರೆ.