ರಾಜ್ಯದಲ್ಲಿ ಎನ್ ಪಿಎಸ್ (NPS) ರದ್ದುಗೊಳಿಸಿ ಓಪಿಎಸ್ (OPS) ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಸರ್ಕಾರದ ವಿರುದ್ಧ ಸರ್ಕಾರಿ ನೌಕರರು ಸಿಡಿದೆದ್ದಿದ್ದಾರೆ. ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ದಿನಾಂಕ:13.10.2022 ರಿಂದ ಒಂದು ತಿಂಗಳು OPS ಸಂಕಲ್ಪ ಯಾತ್ರೆಯನ್ನು ಹಾಗೂ 14 ದಿನಗಳ ಕಾಲ OPS ಜಾರಿಗಾಗಿ ಫ್ರೀಡಂ ಪಾರ್ಕ್‌ನಲ್ಲಿ ಅಹೋ ರಾತ್ರಿ ಧರಣಿ ನಡೆಸಲಾಗಿತ್ತು.
ಪ್ರತಿಭಟನೆಯ ಹಿನ್ನೆಲೆ:ಜನವರಿ ತಿಂಗಳಿಂದ ಮೂರು ತಿಂಗಳ ಕಾಲ Vote for OPS ಅಭಿಯಾನವನ್ನು ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು NPS ಯೋಜನೆಯನ್ನು ರದ್ದುಗೊಳಿಸುವ ಭರವಸೆಯನ್ನು ತನ್ನ ಪುಣಾಳಿಕೆಯಲ್ಲಿ ಸೇರಿಸಲಾಗಿತ್ತು ಎಂಬುದಾಗಿ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಭರವಸೆ:ಮಾನ್ಯ ಮುಖ್ಯಮಂತ್ರಿಯವರು ಅಧಿಕಾರ ವಹಿಸಿಕೊಂಡ ತಕ್ಷಣ ನಮ್ಮ ಸಂಘದ ಪದಾಧಿಕಾರಿಗಳೊಂದಿಗೆ ದಿನಾಂಕ:13.06.2023 ರಂದು ಸಭೆ ನಡೆಸಿ NPS ಯೋಜನೆಯನ್ನು ರದ್ದುಗೊಳಿಸುವ ಕುರಿತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
ಕೇಂದ್ರ ಸರ್ಕಾರದ ನಿರ್ಧಾರ:ಕೇಂದ್ರ ಸರ್ಕಾರವು NPS ಬದಲು UPS ಏಕೀಕೃತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ತೀರ್ಮಾನಿಸಿದ್ದು, ಇದನ್ನು ರಾಜ್ಯದಲ್ಲಿ ನಮ್ಮ ಸಂಘಟನೆಯು ತಿರಸ್ಕರಿಸಿದೆ. ನಮ್ಮ ಬೇಡಿಕೆಯು ಕೇವಲ ಹಳೆ ಪಿಂಚಣೆ ಯೋಜನೆಯನ್ನು ಮರುಜಾರಿಗೊಳಿಸುವುದಾಗಿದೆ.
ಪ್ರತಿಭಟನೆಯ ನಿರ್ಧಾರ:ರಾಜ್ಯ ಸರ್ಕಾರವು OPS ಅನ್ನು ಜಾರಿಗೊಳಿಸಲು ಸಮಿತಿಯನ್ನು ರಚಿಸಿದ್ದು, ಸರ್ಕಾರದ ಈ ಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘವು ವಿರೋಧಿಸಿದೆ. ದಿನಾಂಕ:19.01.2025 ರಂದು ಬೆಂಗಳೂರಿನಲ್ಲಿ ನಡೆದ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ, 2025-26ನೇ ಸಾಲಿನ ಆಯವ್ಯಯದಲ್ಲಿ NPS ರದ್ದುಗೊಳಿಸುವ ಭರವಸೆಯು ದೊರಕದೇ ಇದ್ದಲ್ಲಿ, ದಿನಾಂಕ:07.02.2025 ರಂದು ‘OPS ಹಕ್ಕೊತ್ತಾಯ’ ಧರಣಿ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.








