ಬೆಂಗಳೂರು: ಜಾತಿಗಣತಿ ವರದಿಯು (Census Report) ನಮ್ಮ ಸರ್ಕಾರದ ಕೈ ಸೇರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಮ್ಮ ಸರ್ಕಾರವೇ ಇಡೀ ದೇಶದಲ್ಲಿಯೇ ಜಾತಿ ಗಣತಿಯನ್ನು ಮೊದಲು ಮಾಡಿದೆ. ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಲಾಗಿದೆ. ಈ ಗಣತಿಗಾಗಿ 165 ಕೋಟಿ ರೂ. ಖರ್ಚಾಗಿದೆ ಎಂದು ಹೇಳಿದ್ದಾರೆ.
ನಂತರ ಯಡಿಯೂರಪ್ಪ, ಕುಮಾರಸ್ವಾಮಿ, ಬೊಮ್ಮಾಯಿ ಈ ವರದಿಯನ್ನು ಬಿಡುಗಡೆ ಮಾಡಲಿಲ್ಲ. ಕುಮಾರಸ್ವಾಮಿ ಸಿಎಂ ಆಗಿದ್ದ ಸಂದರ್ಭದಲ್ಲಿ ಈ ವರದಿ ಸಿದ್ಧವಾಗಿತ್ತು. ಅಂದಿನ ಸಚಿವ ಪುಟ್ಟರಂಗಶೆಟ್ಟಿ ವರದಿ ಸ್ವೀಕರಿಸಲು ಮುಂದಾಗಿದ್ದರು. ಆದರೆ, ಕುಮಾರಸ್ವಾಮಿ ವರದಿ ತೆಗೆದುಕೊಳ್ಳಬೇಡ ಎಂದು ಹೆದರಿಸಿದರು. ಹೀಗಾಗಿ ಅವರು ವರದಿ ಪಡೆಯಲಿಲ್ಲ ಎಂದು ಹೇಳಿದ್ದಾರೆ. ಡುವುದಾಗಿ ಘೋಷಣೆ ಮಾಡಿದರು.






