ದೇಶದಲ್ಲಿ ಕೋಲಸಭಾ ಚುನಾವಣೆಯ ಕಾವು ರಂಗೇರುತ್ತಿದ್ದು, ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಚುನಾವಣಾ ಆಯೋಗ ಮಾರ್ಚ್ 9ರ ನಂತರ ಚುನಾವಣೆ ದಿನಾಂಕ ಫಿಕ್ಸ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳು ಅಂತಿಮ ಪರಿಶೀಲನೆಗಾಗಿ ರಾಜ್ಯಗಳಿಗೆ ತೆರಳುತ್ತಿದ್ದು, ಚುನಾವಣಾ ಸಮಿತಿಯು ಮಾರ್ಚ್ 9 ರ ನಂತರ ಲೋಕಸಭೆ ಚುನಾವಣೆಯ ದಿನಾಂಕ ಘೋಷಿಸುವ ಸಾಧ್ಯತೆ ಇದೆ ಎಂದು ವರದಿಯಾಗುತ್ತಿದೆ.
ಸದ್ಯದ ವರದಿಗಳಂತೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ಏಕಕಾಲದಲ್ಲಿ ವಿಧಾನಸಭಾ ಚುನಾವಣೆ ಕೂಡ ನಡೆಯುತ್ತಿದ್ದು, ಸಿದ್ಧತೆ ನಡೆದಿದೆ ಎನ್ನಲಾಗಿದೆ.
2019ರಲ್ಲಿ, ಲೋಕಸಭೆ ಚುನಾವಣೆಯನ್ನು ಮಾರ್ಚ್ 10ರಂದು ಘೋಷಿಸಲಾಗಿತ್ತು. ಆ ವರ್ಷ ಏಪ್ರಿಲ್ 11 ಮತ್ತು ಮೇ 19 ರ ನಡುವೆ 7 ಹಂತಗಳಲ್ಲಿ ಮತದಾನ ನಡೆಸಲಾಗಿತ್ತು. ಮೇ 23 ರಂದು ಮತದಾನ ಹೊರ ಬಿದ್ದಿತ್ತು. ಆದರೆ, ಎಲ್ಲ ಪಕ್ಷಗಳು ಈಗಿನಿಂದಲೇ ತಯಾರಿ ಆರಂಭಿಸಿದ್ದು, ಚುನಾವಣಾ ರಣತಂತ್ರ ನಡೆಯುತ್ತಿವೆ.