ಯಾವಾಗ ನಡೆಯಲಿದೆ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆ ಯಾವಾಗ ನಡೆಯಲಿದೆ..?
ಬೆಂಗಳೂರು ; ರಾಜ್ಯದಲ್ಲಿ ಕೊರೊನಾ ಅಬ್ಬರದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳನ್ನು ಸ್ಥಗಿತಗೊಳಿಸಲಾಗಿದೆ. ಸದ್ಯ ಅನ್ ಲೈನ್ ನಲ್ಲಿ ತರಗತಿಗಳು ನಡೆಯುತ್ತಿವೆ.
ಆದ್ರೆ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಹೀಗಾಗಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆ ಯಾವಾಗ ನಡೆಯಲಿದೆ..?
ಪರೀಕ್ಷೆಯ ಸ್ವರೂಪದಲ್ಲಿ ಬದಲಾವಣೆ ಮಾಡುತ್ತಾ ಶಿಕ್ಷಣ ಇಲಾಖೆ..? ಪರೀಕ್ಷಾ ಅವಧಿಯಲ್ಲಿ ಕಡಿತ ಮಾಡುತ್ತಾ ಎಂಬ ಪ್ರಶ್ನೆಗಳು ಮೂಡಿವೆ.
ಈ ಮಧ್ಯೆ ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಪರೀಕ್ಷೆ ನಿಶ್ಚಿತವಾಗಿದ್ದು, ಸೋಂಕು ಇಳಿಯುತ್ತಿದ್ದಂತೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ರ್ನಿಧರಿಸಿದೆ.
ಕೇಂದ್ರ ಶಿಕ್ಷಣ ಇಲಾಖೆ ಜೊತೆ ನಡೆದ ಸಂವಾದದಲ್ಲಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಯಾವಾಗ ನಡೆಯಲಿದೆ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆ..?
ರಾಜ್ಯ ಶಿಕ್ಷಣ ಇಲಾಖೆ ಜುಲೈನಲ್ಲಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಜುಲೈ ಕೊನೆ ವಾರ ಅಥವಾ ಆಗಸ್ಟ್ ನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.
ಈಗಾಗಲೇ ಪ್ರಶ್ನೆಪತ್ರಿಕೆ ಸಿದ್ಧತೆ, ಪರೀಕ್ಷಾ ಕೇಂದ್ರಗಳ ಸಿದ್ಧತೆ ಬಹುತೇಕ ಮುಕ್ತಾಯವಾಗಿದ್ದು, ಮೊದಲಿಗೆ ದ್ವಿತೀಯ ಪಿಯುಸಿ, ಆ ಬಳಿಕ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಸದ್ಯ ರಾಜ್ಯದಲ್ಲಿ ಸೋಂಕು ಕಡಿಮೆ ಆಗುತ್ತಿದೆ. ಇದು ಹೀಗೆ ಮುಂದುವರೆ ಜುಲೈ ವೇಳೆಗೆ ಸೋಂಕು ಅತೋಟಿಗೆ ಬರುವ ಸಾಧ್ಯತೆಗಳಿವೆ.
ಈ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಇಲಾಖೆ ಜುಲೈನಲ್ಲಿ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಪರೀಕ್ಷೆ ನಡೆಸಲು ತಯಾರಿ ಆರಂಭಿಸಿದೆ.










