ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಲು ಮುಂದಾಗಿದೆ.
ಕಳೆದ ಎರಡು ತಿಂಗಳಿಂದ ಸ್ಥಗಿತಗೊಂಡಿದ್ದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣವನ್ನು ಅರ್ಹ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ರಾಜ್ಯ ಸರ್ಕಾರ (Karnataka Govt.) ಮುಂದಾಗಿದೆ ಎಂದು ತಿಳಿದು ಬಂದಿದೆ.
ಗೃಹ ಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ ಜೂನ್, ಜುಲೈ ತಿಂಗಳ ಹಣ ಬಂದಿರಲಿಲ್ಲ. ಸದ್ಯ ಜೂನ್ ತಿಂಗಳ ಹಣ ಎರಡ್ಮೂರು ದಿನಗಳಲ್ಲಿ DBT ಮೂಲಕ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ. ಇನ್ನೂ ಜುಲೈ, ಆಗಸ್ಟ್ ತಿಂಗಳ ಹಣ ಮುಂದಿನ ತಿಂಗಳು ಬಿಡುಗಡೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಆದರೆ, ವರಮಹಾಲಕ್ಷ್ಮಿ ಹಬ್ಬಕ್ಕೂ (Varamahalakshmi Festival) ಮುನ್ನ 2 ತಿಂಗಳ ಹಣ ಒಟ್ಟಿಗೆ ಬರುತ್ತದೆ ಎಂದು ಅಂದುಕೊಂಡಿದ್ದವರಿಗೆ ನಿರಾಸೆಯಾಗಿದೆ. ಜೂನ್ ತಿಂಗಳ ಹಣ ಬಿಡುಗಡೆಗೆ ಆರ್ಥಿಕ ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, 1.25 ಕೋಟಿ ಫಲಾನುಭವಿಗಳಿಗೆ ಹಣ ಜಮೆಯಾಗಲಿದೆ. ಪ್ರತಿ ತಿಂಗಳಿಗೆ ಅಂದಾಜು 2,500 ಕೋಟಿ ರೂ. ಯೋಜನೆ ಮೂಲಕ ಫಲಾನುಭವಿಗಳಿಗೆ ತಲುಪುತಿತ್ತು. ಇಲ್ಲಿಯವರೆಗೆ 10 ಕಂತುಗಳ ಹಣ ಬಿಡುಗಡೆಯಾಗಿದ್ದು, ಜೂನ್, ಜುಲೈ ತಿಂಗಳ ಹಣ ಬಾಕಿಯಿದೆ. ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸರ್ಕಾರ ಈಗ ಒಂದು ತಿಂಗಳು ಹಣ ಬಿಡುಗಡೆಗೆ ಮುಂದಾಗಿದೆ. ಕೆಲವರಿಗೆ ಇದುವರೆಗೂ ಹಣ ಬಂದಿಲ್ಲ. ಆ ಫಲಾನುಭವಿಗಳ ವಿವರ ಪರಿಶೀಲಿಸಿ ಹಣ ಹಾಕಲು ಕೂಡ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.