ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

Shwetha by Shwetha
August 15, 2026
in ದೇಶ - ವಿದೇಶ, National, Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರನ್ನು ಬಂಚ್ ಆಫ್ ಜೋಕರ್ಸ್ ಎಂದು ಜರಿದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ ಎಂದು ಪ್ರಶ್ನಿಸಿರುವ ಜೋಶಿ, ದೇಶವನ್ನು ಮುನ್ನಡೆಸಲು ಪ್ರಬುದ್ಧ ನಾಯಕತ್ವದ ಅಗತ್ಯವಿದೆಯೇ ಹೊರತು ಹವ್ಯಾಸಿ ನಾಟಕಗಳಲ್ಲ ಎಂದು ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಗೆ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರ ಮತ್ತು ನಾಯಕರನ್ನು ಜೋಕರ್ಸ್ ಹಾಗೂ ಕ್ಲೌನ್ಸ್ ಎಂದು ಕರೆಯುವುದು ರಾಹುಲ್ ಗಾಂಧಿಯವರ ಅಪಕ್ವತೆಯನ್ನು ಎತ್ತಿಹಿಡಿಯುತ್ತದೆ. ದೇಶವನ್ನು ಮುನ್ನಡೆಸುವ ಯಾವುದೇ ಸಾಮರ್ಥ್ಯ ಹಾಗೂ ಜವಾಬ್ದಾರಿ ನಿಮ್ಮಲ್ಲಿಲ್ಲ ಎಂಬುದನ್ನು ನಿಮ್ಮ ಈ ಮಾತುಗಳೇ ಸಾಬೀತುಪಡಿಸುತ್ತಿವೆ ಎಂದು ಆಪಾದಿಸಿದ್ದಾರೆ.

Related posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

August 15, 2026
‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

August 15, 2026

ಕೋಟಿ ಕೋಟಿ ಮತದಾರರಿಗೆ ಅಪಮಾನ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಪಹಾಸ್ಯ ಮಾಡುವ ಮೂಲಕ, ದೇಶದ ಜನತೆ ಐತಿಹಾಸಿಕವಾಗಿ ಅವರನ್ನು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆ ಮಾಡಿದ ಕೋಟ್ಯಂತರ ಮತದಾರರನ್ನು ರಾಹುಲ್ ಗಾಂಧಿ ಅಪಹಾಸ್ಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ವಂಶಾಡಳಿತದ ರಾಜಕಾರಣವನ್ನು ದೇಶದ ಜನತೆ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಈ ಕೋಪದಿಂದ ರಾಹುಲ್ ಗಾಂಧಿ ಮತದಾರರ ವಿವೇಕವನ್ನೇ ಪ್ರಶ್ನಿಸುತ್ತಿದ್ದಾರೆ. ನಕಾರಾತ್ಮಕ ನಿಲುವನ್ನು ತಿರಸ್ಕರಿಸಿದ ದೇಶದ ನಾಗರಿಕರನ್ನು ಜರಿಯುತ್ತಿರುವುದೇ ಕಾಂಗ್ರೆಸ್ ಪಕ್ಷ ಸುಮಾರು ನೂರು ಚುನಾವಣೆಗಳಲ್ಲಿ ಸತತ ಸೋಲು ಕಾಣಲು ಪ್ರಮುಖ ಕಾರಣವಾಗಿದೆ. ರಾಹುಲ್ ಗಾಂಧಿ ಮೊದಲು ತಮ್ಮ ಅಹಂಕಾರವನ್ನು ಬಿಟ್ಟು ಜನರ ತೀರ್ಪನ್ನು ಗೌರವಿಸುವುದನ್ನು ಕಲಿಯಲಿ ಎಂದು ಜೋಶಿ ಚಾಟಿ ಬೀಸಿದ್ದಾರೆ.

ರಾಹುಲ್ ಗಾಂಧಿ ನೀಡಿದ್ದ ವಿವಾದಾತ್ಮಕ ಹೇಳಿಕೆ

ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ನ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರು ಭಾರತದ ಬಗ್ಗೆ ಯಾವುದೇ ಸ್ಪಷ್ಟ ತಿಳುವಳಿಕೆ ಇಲ್ಲದ ಬಂಚ್ ಆಫ್ ಜೋಕರ್ಸ್ ಎಂದು ಟೀಕಿಸಿದ್ದರು. ಆರ್ ಎಸ್ ಎಸ್ ತನ್ನ ಮೂಲ ಶಕ್ತಿಯನ್ನು ಕಳೆದುಕೊಂಡಿದ್ದು, ಬಂಡವಾಳಶಾಹಿಗಳಾದ ಅದಾನಿ ಮತ್ತು ಅಂಬಾನಿ ಅವರ ಸಾಧನವಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದ್ದರು.

ಇಷ್ಟೇ ಅಲ್ಲದೆ, ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯನ್ನು ತೀವ್ರವಾಗಿ ಅಪಹಾಸ್ಯ ಮಾಡಿದ್ದ ರಾಹುಲ್, ವಿದೇಶಿ ನಾಯಕರನ್ನು ತಬ್ಬಿಕೊಳ್ಳುವುದೇ ವಿದೇಶಾಂಗ ನೀತಿ ಎಂದು ಮೋದಿ ಭಾವಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದರು. ಇದೇ ವೇಳೆ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರನ್ನು ವೇದಿಕೆಯಲ್ಲೇ ಅಪ್ಪಿಕೊಳ್ಳುವ ಮೂಲಕ ಪ್ರಧಾನಿ ಮೋದಿಯವರ ಶೈಲಿಯನ್ನು ಅಣಕಿಸಿ ವಿವಾದ ಸೃಷ್ಟಿಸಿದ್ದರು.

ShareTweetSendShare
Join us on:

Related Posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

by Shwetha
August 15, 2026
0

ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

by Shwetha
August 15, 2026
0

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಹಿರಂಗ ಸಭೆ ನಡೆದ ಸ್ಥಳವನ್ನು ಶುದ್ಧೀಕರಣ ಮಾಡಲಾಗಿದೆ ಎನ್ನಲಾದ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ...

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

by Shwetha
August 15, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೊರಡಿಸಲಾಗಿದ್ದ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ...

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

by Shwetha
August 15, 2026
0

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ನಡೆಯುವ ಧರ್ಮಾಧಾರಿತ ಸಭೆ-ಸಮಾರಂಭಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸಚಿವ ಸಂಪುಟ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram