ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಮಹಾ ಅಧಿವೇಶನದ ಶತಮಾನೋತ್ಸವದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ‘ಗಾಂಧಿ ಭಾರತ’ ಐತಿಹಾಸಿಕ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಬೆಳಗಾವಿ ತಾಲೂಕಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ನಗರ ಮತ್ತು ಗ್ರಾಮೀಣ ಭಾಗದ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಿಸಲಾಗಿದೆ.
ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!
ನವದೆಹಲಿ: ಭಾರತೀಯ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮರೆಯಾಗುತ್ತಿದೆ ಮತ್ತು ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈಗ ಕೇಂದ್ರ ಸರ್ಕಾರದ ವಿರುದ್ಧ ಅಂತಿಮ ಹಂತದ...








