ಬೆಂಗಳೂರು : ಇಂದು ರಾಜ್ಯ ಕಾಂಗ್ರೆಸ್ ನಾಯಕರು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಕೊರೊನಾ ಕಿಟ್ ಹಗರಣ ವಿರೋಧಿಸಿ ಹಾಗೂ ರಾಜಸ್ಥಾನ ರಾಜಕೀಯ ಬಿಕ್ಕಟ್ಟಿಗೇ ಬಿಜೆಪಿ ಕಾರಣ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಆದ್ರೆ ಈ ವೇಳೆ ಕೈ ಕಲಿಗಳು ಕೊರೊನಾ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದರು.
ಕೆಪಿಸಿಸಿ ಕಚೇರಿಯಿಂದ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮೂಲಕ ಮೆರವಣಿಗೆ ಆರಂಭಿಸಿದರು. ಈ ವೇಳೆ ಕಾಂಗ್ರೆಸ್ ನ ಯಾವೊಬ್ಬರು ಕೊರೊನಾ ನಿಯಮಗಳನ್ನು ಪಾಲಿಸಲಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಕೆಲವರು ಮಾಸ್ಕ್ ಗಳನ್ನು ಹಾಕಿಕೊಳ್ಳದೇ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಕರ್ನಾಟಕದಲ್ಲಿ ಪ್ರತಿ ದಿನ ಕೊರೊನಾ ಸ್ಫೋಟವಾಗುತ್ತಿದೆ. ಈ ಸಂದರ್ಭದಲ್ಲಿ ಜನರಿಗೆ ಅರಿವು ಮೂಡಿಸಬೇಕಿದ್ದ ನಾಯಕರೇ ಹೀಗೆ ಸುರಕ್ಷಿತ ಕ್ರಮವನ್ನ ತೆಗೆದುಕೊಳ್ಳದೇ ಮೆರವಣಿಗೆ ಮಾಡಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.








