ಹೈದರಾಬಾದ್ : ಸಿಲ್ವರ್ ಸ್ಕ್ರೀನ್ ಮೇಲೆ ಮಿಂಚು ಹರಿಸುವ ಸಿನಿಮಾ ತಾರೆಯರು ಸಾಮಾಜಿಕ ತಾಲತಾಣಗಳ ಮೂಲಕ ತಮ್ಮ ಅಭಿಮಾನಿಗಳ ಸಂಪರ್ಕದಲ್ಲಿರುತ್ತಾರೆ. ಹೀಗಾಗಿ ಸಿನಿ ಮಂದಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ವೀವ್ ಆಗಿರುತ್ತಾರೆ. ಪರಿಣಾಮ ನಟ, ನಟಿಯರ ಸಾಮಾಜಿಕ ಜಾಲತಾಣವನ್ನು ಫಾಲೋ ಮಾಡುವವರ ಸಂಖ್ಯೆಯೂ ಹೆಚ್ಚಿದೆ.
ತಮಿಳು, ತೆಲುಗು, ಕನ್ನಡ ಸೇರಿದಂತೆ ಎಲ್ಲಾ ಭಾಷೆಯ ನಟರು ಟ್ವಿಟ್ಟರ್ ನಲ್ಲಿ ತಮ್ಮದೇ ಯಾದ ಹಿಂಬಾಲಕರನ್ನು ಹೊಂದಿದ್ದಾರೆ. ಆದ್ರೆ ದಕ್ಷಿಣ ಭಾರತದ ಸಿನಿಮಾ ತಾರೆಯರಲ್ಲಿ ಯಾರು ಅತೀ ಹೆಚ್ಚು ಹಿಂಬಾಲಕರನ್ನು ಹೊಂದಿದ್ದಾರೆ..? ಮುಂದೆ ಓದಿ..
ತಲೈವಾರನ್ನ ಹಿಂದಿಕ್ಕಿದ ಪ್ರಿನ್ಸ್
ಹೌದು..! ಟಾಲಿವುಡ್ ನ ಸೂಪರ್ ಸ್ಟಾರ್ ಮಹೇಶ್ ಬಾಬು, ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜಿನಿ ಕಾಂತ್ ಅವರನ್ನು ಟ್ವಿಟ್ಟರ್ ನಲ್ಲಿ ಹಿಂದಿಕ್ಕಿದ್ದಾರೆ. ಮಹೇಶ್ ಬಾಬು ಸದ್ಯ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಅಪರೂಪದ ದಾಖಲೆಯನ್ನು ಬರೆದಿದ್ದು, ದಕ್ಷಿಣ ಭಾರತದ ಸಿನಿಮಾ ತಾರೆಯರಲ್ಲಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಟ್ವಿಟ್ಟರ್ ನಲ್ಲಿ ಸಾಕಷ್ಟು ಆಕ್ಟೀವ್ ಆಗಿರುವ 44 ವರ್ಷದ ಮಹೇಶ್ ಬಾಬು, 1 ಕೋಟಿಗೂ ಅಧಿಕ ಹಿಂಬಾಲಕರನ್ನು ಹೊಂದಿದ್ದಾರೆ. ಈ ಮೂಲಕ ದಕ್ಷಿಣ ಭಾರತದ ಸಿನಿ ತಾರೆಯರ ಟ್ವಿಟ್ಟರ್ ಖಾತೆಗಳಲ್ಲಿ ಬರೋಬ್ಬರಿ 1 ಕೋಟಿ ಹಿಂಬಾಲಕರನ್ನು ಹೊಂದಿರುವ ನಟ ಎಂಬ ಹೆಗ್ಗಳಿಕೆ ಮಹೇಶ್ ಬಾಬು ಪಾತ್ರರಾಗಿದ್ದಾರೆ.
ತಲೈವಾ ರಜಿನಿ ಕಾಂತ್ ಟ್ವಿಟ್ಟರ್ ನಲ್ಲಿ 5.7 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದಾರೆ. ಅಲ್ಲು ಅರ್ಜುನ್ 4.7 ಮಿಲಿಯನ್, ಜೂನಿಯರ್ ಎನ್ ಟಿಆರ್, 4.2 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದಾರೆ. ಉಳಿದಂತೆ ಕಿಚ್ಚ ಸುದೀಪ್ 2.3 ಮಿಲಿಯನ್, ದರ್ಶನ್ 768.5ಕೆ, ಉಪೇಂದ್ರ 928.1ಕೆ, ಹಿಂಬಾಲಕರನ್ನು ಹೊಂದಿದ್ದಾರೆ.








