ಉಡುಪಿ: ಮಲೆನಾಡು ಕರಾವಳಿಯಲ್ಲಿ ನಕ್ಸಲ್ ಎನ್ಕೌಂಟರ್ (Naxal Encounter) ನಡೆದಿದ್ದು, ಕರ್ನಾಟಕ, ಕೇರಳ, ತಮಿಳುನಾಡು ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ (Vikram Gowda) ನನ್ನು ಈಗ ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಲಾಗಿದೆ.
ಉಡುಪಿಯ ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ (Kabbinale Forest) ನಕ್ಸಲ್ ನಿಗ್ರಹ ಪಡೆ (ANF) ವಿಕ್ರಂ ಗೌಡನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದೆ. ಗುಂಡಿನ ಕಾಳಗದಲ್ಲಿ ಎರಡು, ಮೂರು ನಕ್ಸಲರು ಗಾಯಗೊಂಡಿದ್ದು ಅವರಿಗೆ ಅರಣ್ಯದಲ್ಲಿ (Forest) ಶೋಧ ಕಾರ್ಯ ನಡೆಯುತ್ತಿದೆ.
ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಂ ಗೌಡ ಉಡುಪಿ ಹೆಬ್ರಿ ತಾಲೂಕಿನ ಕೂಡ್ಲು ನಾಡ್ವಾಲು ಗ್ರಾಮದವನು. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವ ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ರಾಜ್ಯದಲ್ಲಿ ವಿಕ್ರಂ ಗೌಡ ವಹಿಸಿಕೊಂಡಿದ್ದ. ಈತ 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿತ್ತ. 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಕಾರ್ಮಿಕ ಸಂಘಟನೆಯಿಂದ ಬಂದಿದ್ದ ವಿಕ್ರಂ ಗೌಡ ಮೂರು ಬಾರಿ ಕರ್ನಾಟಕ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ.