`ರೈತ ಪರ’ ಟ್ವೀಟ್ ಮಾಡಿ ಸದ್ದು ಮಾಡ್ತಿರೋ ರಿಹಾನಾ ಯಾರು ಗೊತ್ತಾ..?
ಸದ್ಯ ದೇಶದಲ್ಲಿ ರೈತರ ಪ್ರತಿಭಟನೆ ಜೋರಾಗಿದೆ. ಕೇಂದ್ರ ವಿರುದ್ಧ ಸಮರ ಸಾರಿರುವ ಅನ್ನದಾತರು ದೆಹಲಿಯ ಗಡಿಯಲ್ಲಿ ಸುಮಾರು ದಿನಗಳಿಂದ ಕೊರೆಯುವ ಚಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲ ಕಿಡಿಗೇಡಿಗಳು, ಈ ಪ್ರತಿಭಟನೆಗೆ ಕಪ್ಪು ಚುಕ್ಕೆ ತರುವಂತಹ ಕೆಲಸಗಳನ್ನ ಮಾಡಿದ್ದಾರೆ. ಇವರು ರೈತರಲ್ಲ ಭಯೋತ್ಪಾದಕರು ಅಂತಾ ಹೇಳಿಕೆಗಳು ಬರುತ್ತಿವೆ. ಇನ್ನೊಂದೆಡೆ ರೈತರ ಪರ, ರೈತ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಈ ಮಧ್ಯೆ ಜಗತ್ತಿನ ಪ್ರಖ್ಯಾತ ಪಾಪ್ ಗಾಯಕಿ ರಿಹಾನಾ, ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದು, ಸದ್ಯ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇಷ್ಟು ದಿನ ದೇಶದಲ್ಲಿ ಮಾತ್ರ ಸದ್ದು ಮಾಡುತ್ತಿದ್ದ ರೈತ ಪ್ರತಿಭಟನೆ ಸುದ್ದಿ, ಇದೀಗ ಜಾಗತೀಕ ಸುದ್ದಿಯಾಗಿದೆ. ಇನ್ನು ಗಾಯಕಿ ರಿಹಾನಾ, ಮಾಡಿದ ಟ್ವೀಟ್ ಗೆ ಜಾಗತೀಕವಾಗಿ ಬೆಂಬಲ ವ್ಯಕ್ತವಾಗುತ್ತಿದ್ದರೂ, ನಮ್ಮ ಕೆಲ ಸೆಲಬ್ರೆಟಿಗಳು ಇದು ನಮ್ಮ ವಿಚಾರ, ನಿಮಗ್ಯಾಕೆ ಅನ್ನೋ ರೀತಿ ರೀ ಟ್ವೀಟ್ ಗಳನ್ನ ಮಾಡುತ್ತಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ರಿಹಾನಾ ಬಗ್ಗೆ ಚರ್ಚೆ ಆಗುತ್ತಿದೆ.
ಹಾಗಾದ್ರೆ ಈ ರಿಹಾನಾ ಯಾರು..? ಆಕೆ ಮಾಡಿದ್ದ ಟ್ವೀಟ್ ನಲ್ಲ ಏನಿದೆ ಅನ್ನೋ ಒಂದಿಷ್ಟು ಮಾಹಿತಿ ಇಲ್ಲಿದೆ.
ರಿಹಾನಾ ತಮ್ಮ ಟ್ವೀಟ್ ನಲ್ಲಿ `ಈ ವಿಷಯದ ಕುರಿತು ನಾವೇಕೆ ಮಾತಾಡಬಾರದು?’ ಇಷ್ಟೇ ಬರೆದದ್ದು. ಜತೆಗೆ ಸಿಎನ್ ಎನ್ ಸುದ್ದಿಸಂಸ್ಥೆ ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟದ ಕುರಿತು ಮಾಡಿರುವ ವಿಸ್ತ್ರತ ವರದಿಯ ಲಿಂಕ್ ಶೇರ್ ಮಾಡಿದ್ದರು. ನೋಡನೋಡುತ್ತಿದ್ದಂತೆ ಅದು ಲಕ್ಷಾಂತರ ರೀಟ್ವೀಟ್ ಗಳಾದವು. #Rihanna ಮತ್ತು #FarmersProtest ಹ್ಯಾಶ್ ಟ್ಯಾಗ್ ಗಳು ಜಾಗತಿಕ ಟ್ರೆಂಡ್ ಆದವು.
ಅಂದಹಾಗೆ ರಿಹಾನಾ…! ಜಗತ್ತಿನ ಪ್ರಖ್ಯಾತ ಪಾಪ್ ಗಾಯಕಿಯರಲ್ಲಿ ಒಬ್ಬರು. ಟ್ವಿಟ್ಟರ್ ಒಂದರಲ್ಲೇ ಆಕೆಯ ಅನುಯಾಯಿಗಳ ಸಂಖ್ಯೆ ಹತ್ತು ಕೋಟಿ ದಾಟಿದೆ. ಒಂಭತ್ತು ಗ್ರಾಮಿ ಅವಾರ್ಡ್, ಹದಿಮೂರು ಅಮೆರಿಕನ್ ಮ್ಯೂಸಿಕ್ ಅವಾರ್ಡ್, ಹನ್ನೆರಡು ಬಿಲ್ ಬೋರ್ಡ್ ಮ್ಯೂಸಿಕ್ ಅವಾರ್ಡ್ ಜತೆಗೆ ಆರು ಗಿನ್ನೆಸ್ ದಾಖಲೆಗಳು ಈಕೆಯ ಮಡಿಲಲ್ಲಿವೆ.
ಇದಿಷ್ಟಲ್ಲದೇ ಟೈಂ ಮ್ಯಾಗಜೀನ್ ನ ಜಗತ್ತಿನ ಅತಿಹೆಚ್ಚು ಪ್ರಭಾವಶಾಲಿ ಸೆಲೆಬ್ರಿಟಿಗಳಲ್ಲಿ ಈಕೆ ಹಲವಾರು ವರ್ಷ ಖಾಯಂ ಸ್ಥಾನ ಪಡೆದಿದ್ದಾರೆ. ಆಕೆಯ ಆಸ್ತಿಯ ಒಟ್ಟು ಮೌಲ್ಯ ಬರೋಬ್ಬರಿ 600 ಮಿಲಿಯನ್ ಡಾಲರ್.!
ಇನ್ನು ರಿಹಾನಾ ಹುಟ್ಟುತ್ತಾ ಶ್ರೀಮಂತಳೇನಲ್ಲ.. ಬಡತನ, ಕುಡುಕ ತಂದೆ, ಸಾಮಾಜಿಕ ನಿಂದನೆ ಎಲ್ಲವೂ ರಿಹಾನಾಳನ್ನ ಭಾದಿಸಿವೆ. ರಿಹಾನಾ ಕೆರೆಬಿಯನ್ ದ್ವೀಪ ಸಮೂಹದ ಬಾರ್ಬಡೋಸ್ ಎಂಬ ದೇಶದವರು. ಕುಡುಕ ಅಪ್ಪ ದಿನವೂ ಈಕೆಯ ತಾಯಿಯನ್ನು ಹೊಡೆಯುತ್ತಿದ್ದ. ಅಮ್ಮ ಅಕೌಂಟೆಂಟ್, ಅಪ್ಪ ವೇರ್ ಹೌಸ್ ಒಂದರ ಸೂಪರ್ ವೈಜರ್. ಸಣ್ಣ ವಯಸ್ಸಿನಲ್ಲೇ ರಿಹಾನ ಬಟ್ಟೆ ವ್ಯಾಪಾರ ಮಾಡುತ್ತಿದ್ದಳು. ಕುಡುಕ ಅಪ್ಪ ಕೊಕೈನ್ ಗೆ ಅಡಿಕ್ಟ್ ಆಗಿದ್ದ. ಪ್ರತಿನಿತ್ಯ ಮನೆ ರಣರಂಗವಾಗುತ್ತಿತ್ತು. ಕೊನೆಗೊಂದು ದಿನ ಈಕೆಗೆ ಹದಿನಾಲ್ಕು ವರ್ಷವಾಗಿದ್ದಾಗ ಅಪ್ಪ-ಅಮ್ಮ ಬೇರೆಯಾದರು.
ಸಣ್ಣವಯಸ್ಸಿನಿಂದ ಸಂಗೀತದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ರಿಹಾನಾ 2003ರಲ್ಲಿ ತನ್ನ ಇಬ್ಬರು ಗೆಳತಿಯರೊಂದಿಗೆ ಸೇರಿ ಸಣ್ಣ ತಂಡ ಮಾಡಿಕೊಂಡು ಸಂಗೀತಾಭ್ಯಾಸ ಆರಂಭಿಸಿದಳು. ಅಮೆರಿಕದ ಮ್ಯೂಸಿಕ್ ಪೆÇ್ರಡ್ಯೂಸರ್ ಇವಾನ್ ರೋಜರ್ಸ್ ಎಂಬಾತ ಈ ತಂಡವನ್ನ ಗುರುತಿಸಿ ಪ್ರೋತ್ಸಾಹ ನೀಡಿದ. ಆ ನಂತರ ರಿಹಾನಾಳ ಬದುಕಲ್ಲಿ ನಡೆದಿದ್ದೆಲ್ಲ ಪವಾಡ. ಆಕೆ ಮುಟ್ಟಿದ್ದೆಲ್ಲ ಚಿನ್ನವಾಯ್ತು, ಸಂಗೀತ ಜಗತ್ತು ಅವಳನ್ನು ಆರಾಧಿಸಿತು. ಹಣ, ಪ್ರಶಸ್ತಿ, ಖ್ಯಾತಿ ಎಲ್ಲವೂ ಆಕೆಯನ್ನು ಮುತ್ತಿಕೊಂಡವು. 2008ರ ಫೆಬ್ರವರಿ 22 ರಂದು ಅಂದಿನ ಬಾರ್ಬಡೋಸ್ ಸರ್ಕಾರ ರಿಹಾನಾಗೆ ಗೌರವ ನೀಡಲೆಂದು ರಿಹಾನಾ ಡೇ ಆಚರಿಸಿತು.
ಸಣ್ಣ ವಯಸ್ಸಿನಲ್ಲೇ ಇಷ್ಟೆಲ್ಲಾ ಸಾಧನೆ ಮಾಡಿ ಅಪಾರ ಪ್ರಮಾಣ ಅಭಿಮಾನಿಗಳನ್ನ ಹೊಂದಿರುವ ರಿಹಾನಾ ಈಗ ಭಾರತೀಯ ರೈತರ ಪರವಾಗಿ ಮಾತನಾಡಿದ್ದಾರೆ, ಅದು ಈಗ ಜಾಗತಿಕ ಸುದ್ದಿ.
ಅಂದಹಾಗೆ ರಿಹಾನಾ ಈ ರೀತಿಯಲ್ಲಿ ಜಾಗತಿಕ ವಿದ್ಯಮಾನಗಳಿಗೆ ಸ್ಪಂದಿಸುವುದು ಹೊಸದೇನೂ ಅಲ್ಲ. ಈ ಹಿಂದೆ ಸೂಡಾನ್, ನೈಜೀರಿಯಾಗಳಲ್ಲಿ ನಡೆಯುತ್ತಿರುವ ಸಾಮಾಜಿಕ ನ್ಯಾಯದ ಹೋರಾಟಗಳನ್ನು ಆಕೆ ಬೆಂಬಲಿಸಿದ್ದರು. ಟ್ರಂಪ್ ಅಧ್ಯಕ್ಷರಾದ ನಂತರ ನಡೆದ ಐತಿಹಾಸಿಕ ಮಹಿಳಾ ರ್ಯಾಲಿಯಲ್ಲಿ ರಿಹಾನಾ ಭಾಗವಹಿಸಿದ್ದರು. ಹಲವಾರು ದೇಶಗಳ ಜನರಿಗೆ ವೀಸಾ ನಿಬರ್ಂಧಿಸಿದ ಟ್ರಂಪ್ ಸರ್ಕಾರದ ನಡೆಯನ್ನೂ ಅವರು ಹಿಂದೆ ಕಟುವಾಗಿ ಟೀಕಿಸಿದ್ದರು.
ಇದೀಗ ರಿಹಾನಾ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿದ್ದು, ರೈತರ ಪ್ರತಿಭಟನೆ ಜಾಗತೀಕ ಸುದ್ದಿಯಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










