ADVERTISEMENT
Sunday, January 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಶಾಮನೂರು ಕೋಟೆಗೆ ಉತ್ತರಾಧಿಕಾರಿ ಯಾರು? ವಿಜಯೇಂದ್ರ ನಾಯಕತ್ವಕ್ಕೆ ಅಗ್ನಿಪರೀಕ್ಷೆ

Who is the successor to Shamanur Fort? A test for Vijayendra's leadership

Shwetha by Shwetha
January 2, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ದಾವಣಗೆರೆ: ರಾಜ್ಯ ರಾಜಕಾರಣದ ಭೀಷ್ಮ, ಕಾಂಗ್ರೆಸ್ ಪಕ್ಷದ ಹಿರಿಯ ಆಸ್ತಿ ಡಾ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಇದೀಗ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿದೆ. ಬೆಣ್ಣೆ ನಗರಿಯ ರಾಜಕೀಯ ಸಮೀಕರಣಗಳು ಬದಲಾಗುತ್ತಿದ್ದು, ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ರಣಕಹಳೆ ಮೊಳಗುವ ಮುನ್ನವೇ ಪಕ್ಷಗಳಲ್ಲಿ ಸಂಚಲನ ಶುರುವಾಗಿದೆ.

ಆಡಳಿತರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವಿನ ನೇರ ಹಣಾಹಣಿಗೆ ದಾವಣಗೆರೆ ಸಾಕ್ಷಿಯಾಗಲಿದ್ದು, ಈ ಚುನಾವಣೆ ಕೇವಲ ಒಂದು ಕ್ಷೇತ್ರದ ಗೆಲುವಲ್ಲ, ಬದಲಿಗೆ ರಾಜ್ಯ ನಾಯಕರ ಪ್ರತಿಷ್ಠೆಯ ಅಳತೆಗೋಲಾಗಿದೆ.

Related posts

Do you know if children are born on a new moon day, it is either auspicious or inauspicious?

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

January 24, 2026
ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

January 24, 2026

ಶಾಮನೂರು ಕೋಟೆಗೆ ಉತ್ತರಾಧಿಕಾರಿ ಯಾರು

ದಾವಣಗೆರೆ ದಕ್ಷಿಣ ಕ್ಷೇತ್ರ ಅಕ್ಷರಶಃ ಶಾಮನೂರು ಕುಟುಂಬದ ಭದ್ರಕೋಟೆ. ಕಳೆದ ಚುನಾವಣೆಯಲ್ಲಿ 84,298 ಮತಗಳನ್ನು ಬಾಚಿಕೊಂಡು, ಬಿಜೆಪಿಯ ಅಜಯ್ ಕುಮಾರ್ ಅವರನ್ನು 27,888 ಮತಗಳ ಬೃಹತ್ ಅಂತರದಿಂದ ಮಣಿಸಿದ್ದ ಶಾಮನೂರು ಶಿವಶಂಕರಪ್ಪನವರ ವರ್ಚಸ್ಸು ಇಲ್ಲಿ ಇನ್ನೂ ಮಾಸಿಲ್ಲ. ಈಗ ಅವರ ಉತ್ತರಾಧಿಕಾರಿ ಯಾರಾಗಲಿದ್ದಾರೆ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆ.

ಕಾಂಗ್ರೆಸ್ ಪಾಳಯದಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರುಗಳು ಶಾಮನೂರು ಕುಟುಂಬದ ಕುಡಿಗಳದ್ದೇ ಆಗಿದೆ. ಶಾಮನೂರು ಅವರ ಎರಡನೇ ಪುತ್ರ ಹಾಗೂ ಕೈಗಾರಿಕೋದ್ಯಮಿ ಎಸ್.ಎಸ್. ಗಣೇಶ್ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪುತ್ರ ಹಾಗೂ ಶಾಮನೂರು ಅವರ ಮೊಮ್ಮಗ ಸಮರ್ಥ್ ಶಾಮನೂರು ಕೂಡ ಟಿಕೆಟ್ ರೇಸ್‌ನಲ್ಲಿದ್ದಾರೆ. ಕ್ಷೇತ್ರ ಆಡಳಿತ ಪಕ್ಷದ ಕೈಯಲ್ಲಿದ್ದು, ಜೊತೆಗೆ ಅನುಕಂಪದ ಅಲೆ ಇರುವುದರಿಂದ ಕಾಂಗ್ರೆಸ್ ಗೆಲುವು ಸುಲಭ ಎಂಬ ಲೆಕ್ಕಾಚಾರವಿದೆ. ಆದರೂ, ಅಂತಿಮ ತೀರ್ಮಾನ ಶಾಮನೂರು ಕುಟುಂಬದ ಹಿರಿಯರದ್ದೇ ಆಗಿರುತ್ತದೆ ಎಂದು ಗಣೇಶ್ ಸ್ಪಷ್ಟಪಡಿಸಿದ್ದಾರೆ.

ವಿಜಯೇಂದ್ರಗೆ ನಿಜವಾದ ಸತ್ವ ಪರೀಕ್ಷೆ

ಇತ್ತೀಚೆಗೆ ನಿಧನರಾದ ಎಚ್.ವೈ. ಮೇಟಿ ಅವರ ಬಾಗಲಕೋಟೆ ಕ್ಷೇತ್ರ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗಳು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪಾಲಿಗೆ ನಿಜವಾದ ಅಗ್ನಿಪರೀಕ್ಷೆಯಾಗಿವೆ. ಲೋಕಸಭೆ ಚುನಾವಣೆಯ ನಂತರ ನಡೆಯುತ್ತಿರುವ ಪ್ರಮುಖ ಚುನಾವಣೆ ಇದಾಗಿದ್ದು, ಇಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬಂದರೆ ಮಾತ್ರ ವಿಜಯೇಂದ್ರ ತಮ್ಮ ನಾಯಕತ್ವದ ಮೇಲಿರುವ ವಿಶ್ವಾಸವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಳ್ಳಲು ಸಾಧ್ಯ.

ದಾವಣಗೆರೆಯಲ್ಲಿ ಕಳೆದ ಬಾರಿ ಸೋತಿದ್ದ ಬಿ.ಜೆ. ಅಜಯ್ ಕುಮಾರ್ ಮತ್ತು ವಾಲ್ಮೀಕಿ ಸಮುದಾಯದ ಪ್ರಬಲ ನಾಯಕ ಶ್ರೀನಿವಾಸ್ ದಸ್ಕರಿಯಪ್ಪ ಅವರು ಬಿಜೆಪಿ ಟಿಕೆಟ್‌ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಕಾಂಗ್ರೆಸ್‌ನ ಭದ್ರಕೋಟೆಯನ್ನು ಛಿದ್ರಗೊಳಿಸಲು ಬಿಜೆಪಿ ಯಾವ ತಂತ್ರ ಹೆಣೆಯಲಿದೆ ಎಂಬುದು ಕುತೂಹಲ ಕೆರಳಿಸಿದೆ.

ನಿರ್ಣಾಯಕವಾಗಲಿರುವ ಅಲ್ಪಸಂಖ್ಯಾತ ಮತಗಳು

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರ ಸಂಖ್ಯೆ ನಿರ್ಣಾಯಕವಾಗಿದೆ. ಇತಿಹಾಸವನ್ನು ಗಮನಿಸಿದರೆ ಈ ಸಮುದಾಯವು ಹೆಚ್ಚಾಗಿ ಕಾಂಗ್ರೆಸ್ ಪರ ಒಲವು ತೋರಿದೆ. ಶಾಮನೂರು ಕುಟುಂಬದ ಮೇಲಿನ ನಿಷ್ಠೆ ಮತ್ತು ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್‌ಗೆ ಶ್ರೀರಕ್ಷೆಯಾಗಿದೆ. ಆದರೆ, ಈ ಬಾರಿ ಮತಗಳಲ್ಲಿ ಕೊಂಚ ವಿಭಜನೆಯಾದರೂ ಅದರ ನೇರ ಲಾಭ ಬಿಜೆಪಿಗೆ ಸಿಗಲಿದೆ.

ಒಟ್ಟಾರೆಯಾಗಿ, ಆಡಳಿತಾರೂಢ ಕಾಂಗ್ರೆಸ್ ತನ್ನ ನೆಲೆಯನ್ನು ಉಳಿಸಿಕೊಳ್ಳಲು ಮತ್ತು ಬಿಜೆಪಿ ತನ್ನ ಕಳೆದುಹೋದ ವರ್ಚಸ್ಸನ್ನು ಮರುಗಳಿಸಲು ಈ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ಚುನಾವಣಾ ಆಯೋಗ ದಿನಾಂಕ ಪ್ರಕಟಿಸುವುದೇ ಬಾಕಿ, ದಾವಣಗೆರೆಯಲ್ಲಿ ಈಗಾಗಲೇ ರಾಜಕೀಯ ಕಾವು ಏರುತ್ತಿದೆ.

ShareTweetSendShare
Join us on:

Related Posts

Do you know if children are born on a new moon day, it is either auspicious or inauspicious?

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

by admin
January 24, 2026
0

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಒಳ್ಳೆದಾ ಅಥವಾ ಕೆಟ್ಟದಾ.?? ಹಾಗಾದರೆ ಇದಕ್ಕೆ ಇರುವ ಪರಿಹಾರಗಳ ಮೂಲಕ ನಿಮ್ಮ ಜೀವನ ಬದಲಾಗಬಹುದು. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

by Shwetha
January 24, 2026
0

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಾಂವಿಧಾನಿಕ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ವಿಧಾನಮಂಡಲ ವಿಶೇಷ ಅಧಿವೇಶನದ ಎರಡನೇ ದಿನದ ಕಲಾಪದ ವೇಳೆ, ರಾಜ್ಯಪಾಲರ ಭಾಷಣ ವಿಷಯವೇ...

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

by Shwetha
January 24, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೋಪಕ್ಕೆ ಕೆನಡಾ ಗುರಿಯಾಗಿದೆ. ಗಾಜಾ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಅಂತರರಾಷ್ಟ್ರೀಯ ಶಾಂತಿ ಮಂಡಳಿಗೆ ಸೇರಿಕೊಳ್ಳುವಂತೆ ಕೆನಡಾಕ್ಕೆ...

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

by Shwetha
January 24, 2026
0

‘VB–G RAM G’ ಕಾಯ್ದೆಯ ವಿರುದ್ಧ ನಿರ್ಣಯ ಅಂಗೀಕರಿಸಿದ ರಾಜ್ಯಗಳ ಪಟ್ಟಿಗೆ ಇದೀಗ ತಮಿಳುನಾಡು ಕೂಡ ಸೇರ್ಪಡೆಯಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ನಿರ್ಣಯವನ್ನು...

Lamp Characteristics: What should a god's lamp look like inside the house?

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
January 24, 2026
0

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ಇದೊಂದು ಮಹಾ ಜಿಜ್ಞಾಸೆಯ ವಿಷಯ ಆಗಿದೆ. ಒಬ್ಬೊಬ್ಬರು ಒಂದೊಂದು ತರಹ ಹೇಳಿ ತಲೆ ಕೆಡಿಸಿ ಬಿಡುತ್ತಾರೆ. ನಿಜವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram