ಬೆಳ್ಳಾರೆ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಅಬ್ದುಲ್ಲಾ ಎಂಬ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಶುಕ್ರವಾರ ಬಂಧಿಸಿದ್ರು. ಇದೀಗ ಆರೋಪಿಯ ಗೂಡಂಗಡಿಗೆ ಬೆಂಕಿ ತಗುಲಿ ಸುಟ್ಟು ಭಸ್ಮವಾದ ಘಟನೆ ಇಂದು ಬೆಳಕಿಗೆ ಬಂದಿದೆ. ಅವಘಡ ಅಂಗಡಿಯಲ್ಲಿದ್ದ ಎಲ್ಲಾ ಸಾಮಾಗ್ರಿಗಳು ಸುಟ್ಟು ಕರಕಲಾಗಿದ್ದು. ಅಪಾರ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.

ಇನ್ನು 5ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಡಿ ಅಬ್ದುಲ್ಲಾ ಎಂಬುವವರನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದರು. ಇದಾದ ಬಳಿಕ, ಆರೋಪಿಯು ನಡೆಸುತ್ತಿದ್ದ ಗೂಡಂಗಡಿಗೆ ಬೆಂಕಿ ತಗುಲಿ ಸುಟ್ಟು ಹೋಗಿದೆ. ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ಯಾ ಅಥವಾ ಉದ್ದೇಶ ಪೂರಕವಾಗಿ ಬೆಂಕಿ ಇಡಲಾಗಿದ್ಯಾ ಎಂಬುದು ತನಿಖೆ ಬಳಿಕ ಗೊತ್ತಾಗಲಿದೆ.








