ಬೆಂಗಳೂರು: ಪಾದರಾಯನಪುರ ಗಲಾಟೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್ ಗಳನ್ನು ಮಾಡಿದ್ದು, ಘಟನೆಯನ್ನು ಖಂಡಿಸಿದ್ದಾರೆ. ಅಲ್ಲದೆ ಪೊಲೀಸರು, ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಭಂಗ ತರುತ್ತಿರುವವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್ ಡಿಕೆ.. “ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು.
ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ ‘ಬಲಿ’ ಹಾಕಬೇಕು. ಇಡೀ ಜಗತ್ತು ಎದುರಿಸುತ್ತಿರುವ ಕರೋನಾ ವೈರಸ್ ವಿರುದ್ಧ ಜನತೆ ಸಂಘರ್ಷ ಮಾಡುತ್ತಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಧರ್ಮದ ಗುರಾಣಿಯನ್ನು ಅಡ್ಡ ತಂದು ವ್ಯವಸ್ಥೆ ಬುಡಮೇಲು ಮಾಡುವುದನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ.
ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು.
(1/4)— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 19, 2020
ಪೊಲೀಸರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆಡಳಿತ ವ್ಯವಸ್ಥೆಯ ನೈತಿಕ ಬಲ ಕುಗ್ಗಿಸುವ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರರ ಹೆಡೆಮುರಿ ಕಟ್ಟಬೇಕು” ಎಂದು ಆಗ್ರಹಿಸಿದ್ದಾರೆ.






