2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎದುರು ಕಾಂಗ್ರೆಸ್ ಹೀನಾಯವಾಗಿ ಸೋತಿತ್ತು. ಇದಾದ ಬಳಿಕ ರಾಹುಲ್ ಗಾಂಧಿ ಅವರು ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ರಾಷ್ಟ್ರ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. ನಂತರ ಹಂಗಾಮಿ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮತ್ತೆ ಸೋನಿಯಾ ಗಾಂಧಿ ಅವರೇ ಪಕ್ಷದ ಸಾರಥ್ಯ ವಹಿಸಿಕೊಂಡಿದ್ದರು. ಇದೀಗ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರ ತಾತ್ಕಾಲಿಕ ಅವಧಿ ಇನ್ನೇನು ಮುಕ್ತಾಯವಾಗಲಿದೆ.
ಇದೀಗ ಗಾಂಧಿಯೇತರ ನಾಯಕರನ್ನು ಪಕ್ಷದ ನಾಯಕರನ್ನಾಗಿ ನೇಮಕ ಮಾಡಬೇಕೆಂಬ ದೊಡ್ಡ ಕೂಗು ಪಕ್ಷದಲ್ಲಿ ಎದ್ದಿದ್ದು, ಮುಂದಿನ ನಾಯಕರು ಯಾರಾಗಲಿದ್ದಾರೆಂಬ ಪ್ರಶ್ನೆ ಎದ್ದಿದೆ. ಇದರ ಬೆನ್ನಲ್ಲೇ ಮತ್ತೆ ರಾಗಾ ಎಐಸಿಸಿಯ ಸಾರಥಿ ಆಗಲಿದ್ದಾರಾ ಎಂಬ ಮಾತುಗಳು ಹರಿದಾಡುತ್ತಿವೆ.
ಇತ್ತ ರಾಹುಲ್ ಗಾಂಧಿ ಹೇಳೋದೆ ಬೇರೆ..?
ರಾಹುಲ್ ಗಾಂಧಿ ಅವರು ನಮ್ಮ ಕುಟುಂಬದಿಂದ ಯಾರೂ ಅಧ್ಯಕ್ಷರಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿಕೊಂಡಿದ್ದಾರೆ. ಇದಕ್ಕೆ ನನ್ನ ಸಂಪೂರ್ಣ ಸಹಮತವಿದೆ ಅಂತಾರೆ ಪ್ರಿಯಾಂಕಾ ವಾದ್ರಾ. 
ಈ ನಡುವೆ ನಾಳೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಹಿರಿಯ ನಾಯಕರಾದ ಮನಮೋಹನ್ ಸಿಂಗ್, ಅವರನ್ನು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷರನ್ನಾಗಿ ಅಧಿಕಾರ ವಹಿಸಿಕೊಳ್ಳಲು ಮನವೊಲಿಸಲಾಗುವುದು ಎಂಬ ಮಾತುಗಳು ಸಹ ಕೇಳಿ ಬರ್ತಿವೆ. ಹೀಗಾಗಿ ನಾಳೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಭೆ ಅತ್ಯಂತ ಕುತೂಹಲ ಕೆರಳಿಸಿದೆ.









