ಜಗತ್ತಿನಾದ್ಯಂತ ಡೆಡ್ಲಿ ಕೊರೊನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದೀಗ ವಿಶ್ವ ಆರೋಗ್ಯ ಸಂಸ್ಥೆ ಹೊಸ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, 12 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಿದೆ.
ಹೌದು ವಿಶ್ವದಾದ್ಯಂತ ಕೊರೊನಾ ವೈರಸ್ ಭೀತಿ ದಿನೇ ದಿನೇ ಹೆಚ್ಚುತ್ತಲೇ ಇದೆ. ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಕೈಗೊಂಡಿರುವ ವಿಶ್ವ ಆರೋಗ್ಯ ಸಂಸ್ಥೆ ಇದೀಗ 12 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ಇನ್ನೂ ವಿಶ್ವದ ದೊಡ್ಡಣ್ಣ ಅಮೆರಿಕಾ ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ನಂ 1 ಎನಿಸಿಕೊಂಡಿದೆ. ಇತ್ತ ಬ್ರೆಜಿಲ್ ನಲ್ಲೂ ಕೊರೊನಾ ಆರ್ಭಟ ಮುಂದುವರೆದಿದ್ದು, ಸೋಂಕಿತರ ಸಂಖ್ಯೆಯಲ್ಲಿ 2ನೇ ಸ್ಥಾನ ಪಡೆದುಕೊಂಡಿದ್ದರೆ ಭಾರತ 3ನೇ ಸ್ತಾನದಲ್ಲಿದೆ.









