ದ್ರೌಪದಿ ಮುರ್ಮು –  ಬುಡುಕಟ್ಟು ಮಹಿಳೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಕಥೆ…

1 min read

ದ್ರೌಪದಿ ಮುರ್ಮು –  ಬುಡುಕಟ್ಟು ಮಹಿಳೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಕಥೆ…

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಆವರ ಆಡಳಿತ ಅವಧಿ ಕೆಲವೇ ದಿನಗಳಲ್ಲಿ ಮುಕ್ತಾಯಗೊಳ್ಳಲಿದೆ. ಅವರ ನಂತರ ಸ್ಥಾನಕ್ಕಾಗಿ ದೇಶದಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು ತೀವ್ರ ಕುತೂಹಲಗೊಳಿಸಿದೆ.

ರಾಷ್ಟ್ರಪತಿ ಸ್ಥಾನಕ್ಕಾಗಿ ಹಲವಾರು ಮಂದಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದು ಕೆಲವರು ವಾಪಸ್ ತೆಗೆದುಕೊಂಡಿದ್ದಾರೆ. ಆಡಳಿತರೂಡ ಸರ್ಕಾರ ಮತ್ತು ವಿಪಕ್ಷಗಳು ಕೊನೆಯದಾಗಿ ಯಾರನ್ನ ಅಭ್ಯರ್ತಿಯನ್ನಾಗಿ ಆಯ್ಕೆ ಮಾಡುತ್ತಾರೆ ಎನ್ನವುದು ಕುತೂಹಲ ಸೃಷ್ಠಿಸಿತ್ತು.

 ಆಡಳಿತಾರೂಢ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗ ಮಹಿಳೆ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಈ ಮೂಲಕ ಈ ಬಾರಿಯ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಪಕ್ಷಗಳ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ.

ಇಲ್ಲಿಯವರಗೂ ಈ ಹೆಸರೇ ಕೆಳದಿದ್ದ ನಾವುಗಳು ದ್ರೌಪರಿ ಮುರ್ಮು ಯಾರು ಎಂದು ತಿಳಿದುಕೊಳ್ಳಲು ಹುಡುಕುತ್ತಿದ್ದೇವೆ. NDA ಸೂಚಿಸಿ ರಾಷ್ಟ್ರಪತಿ ಅಭ್ಯರ್ಥಿ ಯಾರು ಎನ್ನುವದನ್ನ ತಿಳಿಸಿಯಲು ಈ ಸ್ಟೋರಿ ಓದಿ..

ದ್ರೌಪದಿ ಮುರ್ಮು –  ರಾಷ್ಟ್ರಪತಿ ಚುನಾವಣೆಗೆ ಎನ್ ಡಿ ಎ ಆರಿಸಿದ ಅಚ್ಚರಿ ಹೆಸರು.  ಮೂಲತಃ ಬುಡುಕಟ್ಟು ಜನಾಂಗದ ಮಹಿಳೆಯಾಗಿರು ದ್ರೌಪದಿ ಮುರ್ಮು ಒಡಿಶಾ ರಾಜ್ಯದವರು. ಜಾರ್ಖಾಂಡ್ ನ ರಾಜ್ಯಪಾಲೆಯಾಗಿ ಕರ್ತವ್ಯ ನಿರ್ವಹಿಸಿರುವ ಅನುಭವನ್ನ ಹೊಂದಿದ್ದಾರೆ.

64 ವರ್ಷದ ದ್ರೌಪದಿ ಮುರ್ಮು ಅವರು ಮೊನ್ನೆಯಷ್ಟೆ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಜೂನ್ 20, 1958 ರಂದು ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಬೈದಪೋಸಿ ಗ್ರಾಮದಲ್ಲಿ ಬಿರಾಂಚಿ ನಾರಾಯಣ ತುಡುಗೆ ಸಂತಾಲಿ ಬುಡಕಟ್ಟು ಕುಟುಂಬದಲ್ಲಿ ಜನಿಸಿದರು.ಇವರ  ತಂದೆ ಮತ್ತು ಅಜ್ಜ ಇಬ್ಬರೂ ಪಂಚಾಯತ್ ರಾಜ್ ವ್ಯವಸ್ಥೆಯಡಿಯಲ್ಲಿ ಗ್ರಾಮದ ಮುಖ್ಯಸ್ಥರಾಗಿದ್ದರು.  ರಾಯರಂಗಪುರದ ಶ್ರೀ ಅರಬಿಂದೋ ಸಮಗ್ರ ಶಿಕ್ಷಣ ಕೇಂದ್ರದಲ್ಲಿ ಅಧ್ಯಯನ ಮಾಡಿದ ಇವರು ಬಿ ಎ ಪದವಿ ಪಡೆದಿದ್ದಾರೆ. ಮುರ್ಮು ಅವರು ರಾಜಕೀಯಕ್ಕೆ ಬರುವ ಮುಂಚೆ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಇನ್ನೂ ವೈವಾಹಿಕ ಜೀವನಕ್ಕೆ ಬರುವುದಾದರೆ ದ್ರೌಪದಿ ಮುರ್ಮು ಅವರು ಶ್ಯಾಮ್ ಚರಣ್ ಮುರ್ಮು ಅವರನ್ನ ಕೈಹಿಡಿದಿದ್ದರು. ದಂಪತಿಗೆ ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿ ಕೂಡ ಇದ್ದರು. ಆದರೆ ಅವರ ಜೀವನದಲ್ಲಿ ನಡೆದ ಕೆಲವು ದುರಂತಗಳಿಂದ ಅವರ ಪತಿ ಮತ್ತು ಇಬ್ಬರು ಪುತ್ರರು ವಿಧಿವಶರಾಗಿದ್ದಾರೆ. ಮುರ್ಮು ಅವರು ಸದ್ಯ ಮಗಳ ಜೊತೆ ವಾಸಿಸುತ್ತಿದ್ದಾರೆ.

ದ್ರೌಪದಿ ಅವರು ರಾಜಕೀಯಕ್ಕೆ ಕಾಲಿಟ್ಟಿದ್ದು 1997 ರಲ್ಲಿ. 1997ರಲ್ಲಿ ರೈರಂಗ್ ಪುರ್ ನಗರ ಪಂಚಾಯತ್ ನಿಂದ ಕೌನ್ಸಿಲರ್ ಆಗಿ ವೃತ್ತಿಜೀವನ ಆರಂಭಿಸಿದರು. ಅವರು ಭಾರತೀಯ ಜನತಾ ಪಕ್ಷದ ಪರಿಶಿಷ್ಟ ಪಂಗಡಗಳ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ರೈರಂಗ್ ಪುರ್ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕಿಯಾಗಿದ್ದರು. 2000ದಲ್ಲಿ ಬಿಜೆಡಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಸಚಿವೆಯಾಗಿ ಕೆಲಸ ಮಾಡಿದ್ದರು. 2009ರಲ್ಲಿ ಬಿಜೆಪಿ ಮೈತ್ರಿಯಿಂದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪಕ್ಷವಾದ ಬಿಜೆಡಿ ಹೊರಬಂದಿದ್ದ ವೇಳೆ ಮುರ್ಮು ಶಾಸಕಿಯಾಗಿದ್ದರು. ನಂತರ 2015 ರಿಂದ 2021 ರವರೆಗೆ ಜಾರ್ಖಂಡ್ ರಾಜ್ಯಪಾಲೆಯಾಗಿ ಸೇವೆ ಸಲ್ಲಿಸಿದರು.

ಒಬ್ಬ ಬುಡಕಟ್ಟು ಜನಾಂಗದ ಸ್ಥಳೀಯ ನಾಯಕಿಯಾಗಿ ತಮ್ಮ ರಾಜಕೀಯ ವೃತ್ತಿ ಜೀವನ ಆರಂಭಿಸಿ ಜಾರ್ಖಂಡ್ ನ ರಾಜ್ಯಪಾಲ ಹುದ್ದೆಗೇರಿ ಇದೀಗ ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗುವವರೆಗೆ ದ್ರೌಪದಿ ಮುರ್ಮು ಅವರ ರಾಜಕೀಯ ಬದುಕು ಬಂದು ನಿಂತಿದೆ.

ದ್ರೌಪದಿ ಮುರ್ಮು ಅವರು ಇದೇ 25ಕ್ಕೆ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ರಾಷ್ಟ್ರಪತಿ ಚುನಾವಣೆ ಜುಲೈ 18 ರಂದು ನಡೆಯಲಿದೆ. ದ್ರೌಪದಿಯವರು ಆಯ್ಕೆಯಾದರೆ ದೇಶದ ಮೊದಲ ಬುಡಕಟ್ಟು ಜನಾಂಗದ ರಾಷ್ಟ್ರಪತಿ ಮತ್ತು ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಳ್ಳಲಿದ್ದಾರೆ.

ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಆಯ್ಕೆಯಾದ ನಂತರ ಮಾತನಾಡಿದ ಅವರು ನಾನು ಈ ಅವಕಾಶವನ್ನು ನಿರೀಕ್ಷಿಸಿರಲಿಲ್ಲ. ನೆರೆಯ ಜಾರ್ಖಂಡ್‌ನ ರಾಜ್ಯಪಾಲೆಯಾದ ನಂತರ ಕಳೆದ ಆರು ವರ್ಷಗಳಿಂದ ಯಾವುದೇ ರಾಜಕೀಯ ಕಾರ್ಯಕ್ರಮಗಳಿಗೆ ಹಾಜರಾಗುತ್ತಿರಲಿಲ್ಲ. ಸಾರ್ವಜನಿಕ ಜೀವನದಿಂದ ಕೊಂಚ ದೂರ ಉಳಿದಿದ್ದೆ. ಇದೀಗ ಎಲ್ಲರೂ ನನ್ನನ್ನು ಬೆಂಬಲಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.  ದ್ರೌಪದಿ ಮರ್ಮು ಅವರ ಹೆಸರು ರಾಷ್ಟ್ರಪತಿ ಚುನಾವಣೆಗೆ ಕೇಳಿಬಂದ ತಕ್ಷಣ ರಾಜ್ಯಾದ್ಯಂತ ಮತ್ತು ವಿಶೇಷವಾಗಿ ಅವರು ವಾಸಿಸುವ ಮಯೂರ್‌ಭಂಜ್ ಜಿಲ್ಲೆಯಲ್ಲಿ ಸಂಭ್ರಮಾಚರಣೆ ಮುಗಿಲುಮುಟ್ಟಿದೆ.

ಝಡ್ + ಭದ್ರತೆ: ಇನ್ನು ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಣೆಯಾಗುತ್ತಿದ್ದಂತೆ ಕೇಂದ್ರ ಸರ್ಕಾರ ದ್ರೌಪದಿ ಮುರ್ಮು ಅವರಿಗೆ ಝಡ್ + ಮಾದರಿಯ ಭದ್ರತೆಯನ್ನು ನೀಡಿದೆ. ಕೇಂದ್ರ ಮೀಸಲು ಪೊಲೀಸ್ ಪಡೆಯಿಂದ ಅವರಿಗೆ ಭದ್ರತೆ ನೀಡಲಾಗಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd