ಪಂಜಾಬ್ ನಲ್ಲಿ ಐಪಿಎಲ್ ಪಂದ್ಯಗಳು ಯಾಕಿಲ್ಲ..?

1 min read
IPL

ಪಂಜಾಬ್ ನಲ್ಲಿ ಐಪಿಎಲ್ ಪಂದ್ಯಗಳು ಯಾಕಿಲ್ಲ..?

2021ರ ಐಪಿಎಲ್ ಟೂರ್ನಿಗೆ ಬಿಸಿಸಿಐ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈಗಾಗಲೇ ಐಪಿಎಲ್ ಬಿಡ್ಡಿಂಗ್ ಪ್ರಕ್ರಿಯೆ ಮುಗಿದಿದೆ. ಎಂಟು ಫ್ರಾಂಚೈಸಿಗಳು ಈಗ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ.
ಈ ನಡುವೆ ಬಿಸಿಸಿಐ ಇನ್ನೂ ಕೂಡ ಐಪಿಎಲ್ ವೇಳಾಪಟ್ಟಿಯನ್ನು ಅಂತಿಮಗೊಳಿಸಿಲ್ಲ. ಏಪ್ರಿಲ್ ನಿಂದ ಜೂನ್ ತನಕ ಐಪಿಎಲ್ ಟೂರ್ನಿಯನ್ನು ಆಯೋಜನೆ ಮಾಡಲು ಬಿಸಿಸಿಐ ಪ್ಲಾನ್ ಮಾಡಿಕೊಳ್ಳುತ್ತಿದೆ.
ಇನ್ನು ಐಪಿಎಲ್ ಪಂದ್ಯಗಳನ್ನು ಆಯೋಜನೆ ಮಾಡಲು ಕ್ರೀಡಾಂಗಣಗಳನ್ನು ಶಾರ್ಟ್ ಲೀಸ್ಟ್ ಮಾಡಿಕೊಂಡಿದೆ. ದೆಹಲಿ, ಕೊಲ್ಕತ್ತಾ, ಚೆನ್ನೈ, ಬೆಂಗಳೂರು ಮತ್ತು ಅಹಮದಾಬಾದ್ ನಲ್ಲಿ ಪಂದ್ಯಗಳನ್ನು ನಡೆಸುವುದರ ಬಗ್ಗೆ ಚರ್ಚೆ ನಡೆಯುತ್ತಿದೆ.
ಮಹಾರಾಷ್ಟ್ರದಲ್ಲಿ ಕೋವಿಡ್ ಆತಂಕ ಹೆಚ್ಚಿರುವುದರಿಂದ ಮುಂಬೈ ನಲ್ಲಿ ಪಂದ್ಯಗಳನ್ನು ಆಯೋಜನೆ ಮಾಡಲು ಸಾಧ್ಯವಾಗುತ್ತಿಲ್ಲ. ಅದೇ ರೀತಿ ಮೊಹಾಲಿಯಲ್ಲಿ ಕೋವಿಡ್ ಆತಂಕ ಕಡಿಮೆ ಇದ್ರೂ ಬಿಸಿಸಿಐ ಮೊಹಾಲಿಯಲ್ಲಿ ಪಂದ್ಯಗಳನ್ನು ಆಯೋಜನೆ ಮಾಡಲು ಹಿಂದೇಟು ಹಾಕುತ್ತಿದೆ.
ಈ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದೇ ರೀತಿ ಕಿಂಗ್ಸ್ ಪಂಜಾಬ್ ತಂಡದ ಸಹ ಮಾಲೀಕ ನೆಸ್ ವಾಡಿಯಾ ಕೂಡ ಬಿಸಿಸಿಐ ನಿಲುವನ್ನು ಪ್ರಶ್ನೆ ಮಾಡಿದ್ದಾರೆ.

 IPL
ಇನ್ನೊಂದೆಡೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಬಿಸಿಸಿಐಗೆ ತನ್ನ ನಿರ್ಧಾರವನ್ನು ಬದಲಾಯಿಸುವಂತೆ ಕೇಳಿಕೊಂಡಿದ್ದಾರೆ. ಬಿಸಿಸಿಐ ನಿರ್ಧಾರದಿಂದ ಅಚ್ಚರಿಯಾಗಿದೆ. ಪಂಜಾಬ್ ನಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಕಡಿಮೆಯಾಗಿದೆ. ಆದ್ರೂ ಮೊಹಾಲಿಯನ್ನು ಪರಿಗಣಿಸದಿರುವುದು ಅಚ್ಚರಿಯಾಗಿದೆ. ಮೊಹಾಲಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜನೆ ಮಾಡಲು ಸರ್ಕಾರ ಮುನ್ನೆಚ್ಚೆರಿಕೆಯ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಈ ಬಗ್ಗೆ ಬಿಸಿಸಿಐ ತನ್ನ ನಿರ್ಧಾರವನ್ನು ಮತ್ತೆ ಪರಿಶೀಲನೆ ನಡೆಸಬೇಕು ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.
ಆದ್ರೆ ಬಿಸಿಸಿಐ ಇನ್ನೂ ಕೂಡ ತನ್ನ ನಿರ್ಧಾರವನ್ನು ಪ್ರಕಟಿಸಿಲ್ಲ. ಅದು ಅಲ್ಲದೆ ಪ್ರೇಕ್ಷಕರಿಗೆ ಅವಕಾಶ ನೀಡುವ ಬಗ್ಗೆಯೂ ಸ್ಪಷ್ಟತೆ ಸಿಕ್ಕಿಲ್ಲ.
ಒಟ್ಟಿನಲ್ಲಿ 2021ರ ಐಪಿಎಲ್ ಟೂರ್ನಿಗೂ ಕೋವಿಡ್ ಆತಂಕವಂತೂ ಇದ್ದೇ ಇದೆ. ಏನೇ ಇದ್ರೂ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬಿಸಿಸಿಐ ಈ ಬಾರಿಯ ಐಪಿಎಲ್ ಟೂರ್ನಿಯನ್ನು ಆಯೋಜನೆ ಮಾಡಲಿದೆ.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd